ಬಂಟ್ವಾಳ:ತಾಲ್ಲೂಕಿನ ವಿವಿಧ ಶಾಲಾ ವಿದ್ಯಾರ್ಥಿಗಳಿಗೆ ತ್ವರಿತವಾಗಿ ಆದಾಯ ಮತ್ತು ಜಾತಿ ದೃಢಪತ್ರ ವಿತರಣೆಗೆ ಸಂಬಂಧಿಸಿದಂತೆ ಒಟ್ಟು ಮೂರು ಹೋಬಳಿಯಲ್ಲಿ ಅಟಲ್ ಜನಸ್ನೇಹಿ ಕೇಂದ್ರಗಳ ಮೂಲಕ ವ್ಯವಸ್ಥೆ ಮಾಡಲಾಗಿದೆ. ಈ ಜಾತಿ ದೃಢಪತ್ರವು ಐದು ವರ್ಷಗಳ ತನಕ ಚಾಲ್ತಿಯಲ್ಲಿರುವ ಹಿನ್ನೆಲೆಯಲ್ಲಿ ನಿಗದಿತ ಶುಲ್ಕ ಪಾವತಿಸಿ ದೃಢಪತ್ರ ಪಡೆಯಬಹುದು. ಇದಕ್ಕಾಗಿ ಪ್ರತೀ ಬಾರಿ ಅರ್ಜಿ ಸಲ್ಲಿಸುವ ಪ್ರಮೇಯ ಇಲ್ಲ ಎಂದು ತಹಶೀಲ್ದಾರ್ ಪುರಂದರ ಹೆಗ್ಡೆ ಸ್ಪಷ್ಟಪಡಿಸಿದ್ದಾರೆ.
