ವಾಮಂಜೂರು: ವಾಮಂಜೂರು ಸೈಂಟ್ ರೇಮಂಡ್ಸ್ ಪದವಿ ಕಾಲೇಜಿನ ವಿದ್ಯಾರ್ಥಿಗಳ ಪ್ರವೇಶೋತ್ಸವವು ಜೂ.18 ಗುರುವಾರ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿತಿಯಾಗಿ ಕಾಲೇಜು ಪ್ರಾಂಶುಪಾಲೆ ಸಿಸ್ಟರ್ ಸೆಲಿನಾವಾಸ್ ಹೊಸದಾಗಿ ಸೇರಿದ ವಿದ್ಯಾರ್ಥಿಗಳಿಗೆ ಸ್ವಾಗತ ಮಾಡಿದರು. ಪ್ರತಿ ವಿದ್ಯಾರ್ಥಿಗಳಿಗೆ 1 ನೋಟ್‍ಬುಕ್ ಮತ್ತು ಪೆನ್ನನ್ನು ನೀಡಲಾಯಿತು.


ಉಪಪ್ರಾಂಶುಪಾಲೆ ಸಿಸ್ಟರ್ ಸಗಯಾ ಸೆಲ್ವಿ ಉಪಸ್ಥಿತರಿದ್ದರು.





