ಮುಂಬಯಿ : ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಪದಾಧಿಕಾರಿಗಳ ಸಭೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ದ.ಕಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಸ್. ಪ್ರದೀಪ್ ಕುಮಾರ ಕಲ್ಕೂರ ಜಿಲ್ಲಾ ಸಾಹಿತ್ಯ ಕಾರ್ಯಕ್ರಮಗಳ ವಿವರ ನೀಡಿದರು. ಕನ್ನಡ ಸಾಹಿತ್ಯ ಪರಿಷತ್ತು ಶತಮಾನೋತ್ಸವದ ಆಚರಣೆ ಶತಮಾನ ಕಂಡ ಶಾಲೆಗಳನ್ನು ಅಭಿನಂದಿಸುವುದು, ಕನ್ನಡ ಮಾಧ್ಯಮದಲ್ಲಿ ಶೇಕಡಾ ನೂರು ಫಲಿತಾಂಶ ಪಡೆದ ಶಾಲೆಗಳನ್ನು ಗೌರವಿಸುವುದು, ಕನ್ನಡ ಭಾಷಾ ಅನುಷ್ಠಾನ ಜಾಗೃತಿ ಇವೇ ಮೊದಲಾದ ಕಾರ್ಯಕ್ರಮಗಳನ್ನು ತಾಲೂಕು ಮಟ್ಟದಲ್ಲಿ ಹಮ್ಮಿಕೊಳ್ಳುವುದರ ಕುರಿತು ಸಭೆಯ ಮುಂದಿಟ್ಟರು. ಜುಲೈ ತಿಂಗಳಕೊನೆಯ ವಾರ ಅಥವಾ ಆಗಸ್ಟ್ ತಿಂಗಳ ಮೊದಲ ವಾರದಲ್ಲಿ ಇಪ್ಪತ್ತನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕಟೀಲಿನಲ್ಲಿ ನಡೆಸುವ ಬಗ್ಗೆ ಸಭೆಯಲ್ಲಿ ನಿರ್ಣಯ ತೆಗೆದುಕೊಂಡು ಸ್ಥಳೀಯ ಗಣ್ಯರ ಚರ್ಚಿಸಿ ಸ್ವಾಗತ ಸಮಿತಿಯನ್ನು ರಚಿಸಲು ತೀರ್ಮಾನಿಸಲಾಯ್ತು.
IMG-20150620-WA0095
ಸಭೆಯಲ್ಲಿ ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷರಾದ ಡಾ| ಬಿ.ಯಶೋವರ್ಮ ಅವರು ಮಾತನಾಡಿ ಪ್ರದೀಪ ಕುಮಾರ ಕಲ್ಕೂರ ಅವರು ರಚನಾತ್ಮಕವಾಗಿ ಸಾಹಿತ್ಯದ ಚಟುವಟಿಕೆಗಳನ್ನು ನಡೆಸಿಕೊಂಡು ಬಂದಿರುವುದು ಇತರ ಜಿಲ್ಲೆಗಳಿಗೆ ಮಾದರಿಯಾಗಿದೆ, ಸಾಹಿತ್ಯ ಕ್ಷೇತ್ರದಲ್ಲಿ ಅವಿಸ್ಮರಣೀಯ. ಇದು ಹೀಗೆ ಮುಂದುವರಿಯಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು. ಸಭೆಯಲ್ಲಿ ಪುತ್ತೂರು ತಾಲೂಕು ಘಟಕದ ಅಧ್ಯಕ್ಷ ಡಾ| ವರದರಾಜ ಚಂದ್ರಗಿರಿ ಮಂಗಳೂರು ತಾಲೂಕು ಘಟಕ ಅಧ್ಯಕ್ಷೆ ಶ್ರೀಮತಿ ವಿಜಯಲಕ್ಷ್ಮೀ ಶೆಟ್ಟಿ, ಬಂಟ್ವಾಳ ಅಧ್ಯಕ್ಷ ಜಯಾನಂದ ಪೆರಾಜೆ ಪರಿಷತ್ತಿನ ಪದಾಧಿಕಾರಿಗಳಾದ ಶ್ರೀಮತಿ ಎ.ಪಿ. ಮಾಲತಿ ಮತ್ತು ಅಬ್ರಹಾಂ ವರ್ಗೀಸ್ ಹಾಜರಿದ್ದರು. ಜಿಲ್ಲಾ ಗೌರವ ಕಾರ್ಯದರ್ಶಿಗಳಾದ ಡಾ| ಎಂ.ಪಿ ಶ್ರೀನಾಥ್ ಸ್ವಾಗತಿಸಿದರು. ಬಿ.ಐತಪ್ಪ ನಾಯ್ಕ್ ವಂದಿಸಿದರು.

By Suddi9

Leave a Reply

Your email address will not be published. Required fields are marked *