ಶೇರು ಪೇಟೆ ಏರುಮುಖ
ಶೇರುಪೇಟೆಯ ಸೂಚ್ಯಂಕ ಸತತ ಒಂಬತ್ತನೇ ದಿನವೂ ಇಂದಿನ ಆರಂಭಿಕ ವಹಿವಾಟಿನಲ್ಲಿ ಭರ್ಜರಿ ಚೇತರಿಕೆ ಕಂಡಿದೆ.ಬ್ಯಾಂಕಿಂಗ್, ಬಂಡವಾಳ ವಸ್ತುಗಳು ಮತ್ತು ತೈಲ ಹಾಗೂ ಅನಿಲ ಕ್ಷೇತ್ರದ ಶೇರುಗಳ ಮಾರಾಟಕ್ಕೆ ಹೂಡಿಕೆದಾರರು ಆಸಕ್ತಿ ತೋರಿದ್ದಾರೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
ಬಿಎಸ್‌ಇ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 22,598.19 ಅಂಕಗಳಿಗೆ ತಲುಪಿದೆ ತೈಲ ಮತ್ತು ಅನಿಲ ಕ್ಷೇತ್ರದ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 70.13ರಷ್ಟು ಏರಿಕೆ ಕಂಡಿದೆ.ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 37.65 ಪಾಯಿಂಟ್‌ಗಳ ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.