ಬಂಟ್ವಾಳ: ಇಲ್ಲಿನ ಪುರಸಭಾ ವ್ಯಾಪ್ತಿಯ ಕಸವಿಲೇವಾರಿ ಸಮಸ್ಯೆಯ ಪರಿಹಾರರ್ಥವಾಗಿ ಸಜೀಪನಡು ಗ್ರಾಮದ ಕಂಚಿನಡ್ಕ ಪದವಿನಲ್ಲಿ ತ್ಯಾಜ್ಯ ಸಂಸ್ಕರಣ ಘಟಕ ನಿರ್ಮಾಣಕ್ಕೆ ಬಂಟ್ವಾಳ ಪುರಸಭೆ ವತಿಯಿಂದ ಈಗಗಲೇ 1 ಕೋಟಿ ರುಪಾಯಿ ವೆಚ್ಚ ಮಾಡಲಾಗಿದ್ದು ಇದೀಗ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮನಾಥ ರೈಯವರು ಘನತ್ಯಾಜ್ಯ ಘಟಕ ನಿರ್ಮಾಣಕ್ಕೆ ಸಂಬಂಧಪಟ್ಟಂತೆ ಪರಿಸರ ಇಲಾಖೆಯಿಂದ ಹೆಚ್ಚುವರಿಯಾಗಿ ಅನುದಾನ ಬಿಡುಗಡೆ ಮಾಡಿದ್ದು ಎಲ್ಲಾ ಕಾಮಗಾರಿಗೆಳಿಗೆ ಟೆಂಡರ್ ಕರೆಯಲಾಗಿದೆ ಎಂದು ಜಿಲ್ಲಾ ಯೋಜನ ಸಮಿತಿ ಹಾಗೂ ಪುರಸಭ ಸದಸ್ಯ ವಾಸು ಪೂಜಾರಿ ತಿಳಿಸಿದ್ದಾರೆ.
BTW_JUNE18_5
ಈಗಾಗಲೇ 1 ಕೊಟಿ ರುಪಾಯಿ ವೆಚ್ಚದ ಕಾಮಾಗರಿ ನಡೆದಿದ್ದು ಪುರಸಭೆಯ ಪ್ರತೀ ಸಾಮನ್ಯ ಸಭೆಗಳಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದ್ದು ಘಟಕ ನಿಮಾಣದ ಬಗ್ಗೆ ಹಿಂದೇಟು ಹಾಕುವ ಪ್ರಶ್ನೆಯೇ ಇಲ್ಲ ಎಂದು ಅವರು ಪ್ರತಿಕ್ರಿಯಿಸಿದ್ದಾರೆ. ನಿರ್ಮಲ ಬಂಟ್ವಾಳ ಯೋಜನೆಯಡಿ ಜೆಸಿಬಿ ಖರೀದಿಸಲಾಗಿದ್ದು ಲಾರಿ, ಟ್ರಾಕ್ಟರ್, ಇನ್ನಿತರ ಪರಿಕರಗಳು ಶೀಘ್ರದಲ್ಲಿ ಬರಲಿದ್ದು ಶೀಘ್ರದಲ್ಲಿ ಬಂಟ್ವಾಳ ಪುರಸಭೆ ತ್ಯಾಜ್ಯಮುಕ್ತ ನಗರವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿರುವ ಅವರು ಬಂಟ್ವಾಳ ತ್ಯಾಜ್ಯ ಮುಕ್ತ ನಗರವಾಗುವ ನಿಟ್ಟಿನಲ್ಲಿ ಸಾರ್ವಜನಿಕರ ಸಹಕಾರವೂ ಅಗತ್ಯ ಎಂದು ಮನವಿ ಮಾಡಿದ್ದಾರೆ.

By Suddi9

Leave a Reply

Your email address will not be published. Required fields are marked *