ಬಂಟ್ವಾಳ: ಭಾರತೀಯ ಜನತಾ ಪಕ್ಷದ ಮಹಾಸಂಪರ್ಕ ಅಭಿಯಾನಕ್ಕೆ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 6 ಶಕ್ತಿ ಕೇಂದ್ರಗಳಲ್ಲಿ ಮಂಗಳವಾರ ಚಾಲನೆ ಸಿಕ್ಕಿದೆ. ಗೋಪಾಕೃಷ್ಣ ಶೆಣೈ, ಪ್ರಮೋದ್ ಕುಮಾರ್ ಅಜ್ಜಿಬೆಟ್ಟು ಹಾಗೂ ಕೃಷ್ಣ ನಾಯಕ್ ಅವರ ಮನೆಗೆ ತೆರಳಿ ಮಹಾಸಂಪರ್ಕ ಅಭಿಯಾನಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಲಾಯಿತು.

ಈ ಸಂದರ್ಭ ಕ್ಷೇತ್ರ ಸಮಿತಿ ಅಧ್ಯಕ್ಷ ಜಿ. ಆನಂದ, ಬಿಜೆಪಿ ಮುಖಂಡ ರಾಜೇಶ್ ನಾಕ್ ಉಳಿಪಾಡಿಗುತ್ತು, ರಾಜ್ಯ ಉಪಾಧ್ಯಕ್ಷೆ ಸುಲೋಚನಾ ಭಟ್, ಪುರಸಭಾ ಸದಸ್ಯ ದೇವದಾಸ್ ಶೆಟ್ಟಿ, ಮಾಜಿ ಅಧ್ಯಕ್ಷ ದಿನೇಶ್ ಭಂಡಾರಿ ಪ್ರಮುಖರಾದ ರಾಮದಾಸ ಬಂಟ್ವಾಳ, ದೇವಪ್ಪ ಪೂಜಾರಿ, ಪವನ್ ಕುಮಾರ್, ಕೃಷ್ಣಪ್ಪ ಪೂಜಾರಿ, ರಮಾನಾಥ ರಾಯಿ, ಭರತ್ ಮತ್ತಿತರರು ಹಾಜರಿದ್ದರು.
