ಬಂಟ್ವಾಳ: ಅಮ್ಟೂರು ಗ್ರಾಮದ ಪೂವಳ ನಿವಾಸಿ, ನಿವೃತ್ತ ಶಿಕ್ಷಕ ಪಿ.ರಾಮರಾವ್(84) ರವರು ಅಲ್ಪಕಾಲದ ಅಸೌಖ್ಯದಿಂದ ಸೋಮವಾರ ಸಂಜೆ ತಮ್ಮ ಸ್ವಗೃಹದಲ್ಲಿ ನಿಧನರಾದರು.

ಶಂಭೂರು, ನೂಜಿಬೈಲು, ಕಲ್ಲಡ್ಕ ಸೇರಿದಂತೆ ವಿವಿಧ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆಸಲ್ಲಿಸಿದ್ದ ಇವರು, ಬಾಳ್ತಿಲ ಗ್ರಾಮದ ಕಂಠಿಕ ಶಾಲೆಯಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದರು. ಮೃತರು ಪತ್ನಿ, ಪತ್ರಕರ್ತ ಸೂರ್ಯ ನಾರಾಯಣ ಪೂವಳ ಸಹಿತ ನಾಲ್ವರು ಗಂಡು ಮಕ್ಕಳು, ಇಬ್ಬರು ಹೆಣ್ಣು ಮಕ್ಕಳು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
