ಮೂಡುಬಿದರೆ: ಬೆಳುವಾಯಿ ಗ್ರಾ.ಪಂ ವ್ಯಾಪ್ತಿಯ ಚಿಲಿಂಬಿ ಕೇಂಜನಕೆರೆಯನ್ನು ಸಣ್ಣ ನೀರಾವರಿ ಇಲಾಖೆಯ ಮೂಲಕ 75ಲಕ್ಷ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದ್ದು ಶುಕ್ರವಾರ ಲೋಕಾರ್ಪಣೆಗೊಳಿಸಲಾಯಿತು.

ಮೀನುಗಾರಿಕಾ ಸಚಿವ ಕೆ.ಅಭಯಚಂದ್ರ ಜೈನ್ ಲೋಕಾರ್ಪಣೆಗೊಳಿಸಿ, ಕೆರೆಯನ್ನು ಅಭಿವೃದ್ಧಿಪಡಿಸಿರುವುದರಿಂದ ಹತ್ತಿರದ ಪ್ರದೇಶಗಳಲ್ಲಿ ಅಂತರ್ಜಲ ಹೆಚ್ಚುತ್ತದೆ. ಈ ಕೆರೆಯ ಸನಿಹದಲ್ಲಿರುವ ಕೃಷಿಕರಿಗೆ ಇದರಿಂದ ಹೆಚ್ಚಿನ ಅನುಕೂಲವಾಗಲಿದೆ. ಮುಂದಿನ ದಿನಗಳಲ್ಲಿ ಈ ಭಾಗದ ಜನರಿಗೆ ಈ ಕರೆಯಿಂದ ಕುಡಿಯುವ ನೀರನ್ನು ಒದಗಿಸಲು ಪ್ರತ್ಯೇಕ ಯೋಜನೆ ರೂಪಿಲಾಗುವುದು ಎಂದರು.
ಜಿ.ಪಂ ಸದಸ್ಯ ಅಂಬಿಕಾ ಡಿ ಶೆಟ್ಟಿ, ತಾ.ಪಂ.ಸದಸ್ಯೆ ಪ್ರೇಮಾ ನಾಯ್ಕ್, ಗ್ರಾ.ಪಂ ಮಾಜಿ ಅಧ್ಯಕ್ಷ ರಾಘು ಪೂಜಾರಿ, ಸಣ್ಣ ನೀರಾವರಿ ಇಲಾಖೆಯ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ ಷಣ್ಮುಗಂ, ಕಿರಿಯ ಇಂಜಿನಿಯರ್ ರಾಕೇಶ್, ಪಂಚಾಯಿತಿ ಸದಸ್ಯರಾದ ಶಿವರಾಮ್ ಹೆಗ್ಡೆ, ಲವಿನಾ ಕುಟಿನ್ಹ, ಯೋಲ್ಸನ್ ಪಾಯಸ್, ಗುತ್ತಿಗೆದಾರ ನವೀನ್ ಹೆಗ್ಡೆ ಉಪಸ್ಥಿತರಿದ್ದರು.
