ಬಂಟ್ವಾಳ: ನರಿಕೊಂಬು ಗ್ರಾಮಪಂಚಾಯತ್ನ ನೂತನ ಅಧ್ಯಕ್ಷರಾಗಿ ಯಶೋಧರ ಕರ್ಬೆಟ್ಟು ಹಾಗೂ ಉಪಾಧ್ಯಕ್ಷರಾಗಿ ರಾಜೀವಿ ಕೃಷ್ಣಪ್ಪ ಪೂಜಾರಿ ಆಯ್ಕೆಯಾಗಿದ್ದಾರೆ.

ಸೊಮವಾರ ಪಂಚಾಯತ್ ಸಭಾಂಗಣದಲ್ಲಿ ನಡೆದ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ನಾರಾಯಣ ಗೌಡ ನೋಡಲ್ ಅಧಿಕಾರಿಯಾಗಿ ಭಾಗವಹಿಸಿದ್ದರು. ಪಂಚಾಯತ್ ಅಭಿವೃದ್ದಿ ಅಧಿಕಾರಿ ಬಿ.ಎನ್. ಶಮಂತ ಕುಮಾರಿ ಸಹಕರಿಸಿದರು. ಅಧ್ಯಕ್ಷ ಸ್ಥಾನ ಸಾಮಾನ್ಯ ಹಾಗು ಉಪಾದ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ನೂತನ ಅಧ್ಯಕ್ಷ ಉಪಾಧ್ಯಕ್ಷರಾಗಿ ಆಯ್ಕೆಯಾದರು. ಬಿಜೆಪಿ ಮುಖಂಡರಾದ ಪದ್ಮನಾಭ ಮಯ್ಯ, ಪುರುಷೋತ್ತಮ ಸಾಲ್ಯಾನ್ ಶಂಭೂರು, ಪ್ರೇಮನಾಥ ಶೆಟ್ಟಿ ಹಾಜರಿದ್ದರು.
