ಬಂಟ್ವಾಳ : ಪರಿಸರ ಸಂರಕ್ಷಣೆಯಲ್ಲಿ ಮಾನವರ ಪಾತ್ರ ಬಹಳ ಮಹತ್ತರವಾದುದು . ಪರಿಸರ ನಾಶದಿಂದ ಅನೇಕ ದುಷ್ಪರಿಣಾಮಗಳನ್ನು ಎದುರಿಸಬೇಕಾಗಬಹುದು ಎಂದು ಗೌ/ಪ್ರ/ಸಿವಿಲ್ ನ್ಯಾಯಾಧೀ ಶರಾದ ದೇವಾನಂದ ನುಡಿದರು.
ಅವರು ತಾಲೂಕು ಕಾನೂನು ಸೇವೆಗಳ ಸಮಿತಿ , ವಕೀಲರ ಸಂಘ , ಸರಕಾರಿ ಪ್ರೌಢಶಾಲೆ ಮತ್ತು ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ಕೊಡಂಗೆ ಮತ್ತು ಕರ್ನಾಟಕ ಅರಣ್ಯ ಇಲಾಖೆ ಬಂಟ್ವಾಳ ವಲಯ ಇದರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕೊಡಂಗೆ ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


ಜಾಗತಿಕ ತಾಪಮಾನ ಹೆಚ್ಚಳ ತಡೆಯುವಲ್ಲಿ ಅರಣ್ಯಗಳ ಮಹತ್ವ ಮತ್ತು ಸರಿಸರ ಮಾಲಿನ್ಯ ಮಾನವನ ಮೇಲೆ ಉಂಟು ಮಾಡುತ್ತಿರುವ ದುಷ್ಪರಿಣಾಮಗಳ ಬಗ್ಗೆ ಬಂಟ್ವಾಳ ವಲಯ ಅರಣ್ಯ ಅಧಿಕಾರಿ ಸುಬ್ರಹ್ಮಣ್ಯ ರಾವ್ ಮಕ್ಕಳಿಗೆ ಮಾಹಿತಿ ನೀಡಿದರು. ಮುಖ್ಯೋಪಾದ್ಯಾಯ ಭಾಸ್ಕರ್ ರಾವ್ ಟಿ. ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಬಂ.ನಗರ ಉಪನಿರೀಕ್ಷಕ ನಂದಕುಮಾರ್ , ಸಹಾಯಕ ಸರಕಾರಿ ಅಭಿಯೋಜಕಿ ಅರ್ಚನಾ ಪ್ರಸಾದ್ , ವಕೀಲರ ಸಂಘದ ಅಧ್ಯಕ್ಷ ಚಂದ್ರಶೇಖರ ಪೂಜಾರಿ , ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮತ್ತು ಪುರಸಭಾ ಸದಸ್ಯ ಮಹಮ್ಮದ್ ನಂದರಬೆಟ್ಟು , ತುಂಬೆ ಉಪವಲಯ ಅರಣ್ಯಾಧಿಕಾರಿ ಸೀತಾರಾಮ ಶೆಟ್ಟಿ ಉಪಸ್ಥಿತರಿದ್ದರು. ಶಿಕ್ಷಕ ತಾರೇಶ್ ನಾಯಕ್ ಸ್ವಾಗತಿಸಿದರು. ಶಿಕ್ಷಕ ಜೋಯೆಲ್ ಲೋಬೋ ವಂದಿಸಿ ಕಾರ್ಯಕ್ರಮ ನಿರೂಪಿಸಿದರು.
