ಬಂಟ್ವಾಳ:ಬಂಟ್ವಾಳ ತಾಲ್ಲೂಕಿನಲ್ಲಿ ದಿನೇ ದಿನೇ ಡೆಂಗೆ ಜ್ವರಬಾಧೆ ಹೆಚ್ಚುತ್ತಿದ್ದು, ಶಂಕಿತ ಡೆಂಗೆ ಜ್ವರದಿಂದ ಬಳಲುತ್ತಿದ್ದ ಯುವಕರೊಬ್ಬರು ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ.
ಮೃತರನ್ನು ನಾವೂರು ಗ್ರಾಮದ ಕನಪಾದೆ ಕ್ವಾರ್ಟಸ್ ನಿವಾಸಿ ಅಣ್ಣು ಮುಗೇರ ಎಂಬವರ ಪುತ್ರ ಹರೀಶ (27) ಎಂದು ಗುರುತಿಸಲಾಗಿದೆ. ಇವರು ಕಳೆದ ಎರಡು ವಾರಗಳಿಂದ ಜ್ವರದಿಂದ ಬಳಲುತ್ತಿದ್ದು, ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಸೂಕ್ತ ವ್ಯವಸ್ಥೆ ಇಲ್ಲದ ಪರಿಣಾಮ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.
ಕಳೆದ ಭಾನುವಾರದಿಂದ ಜ್ವರ ಉಲ್ಬಣಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ರಾತ್ರಿ ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
