ಮೂಡುಬಿದರೆ: ಹೋಬಳಿಯಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದ ವಾಲ್ಪಾಡಿ ಗ್ರಾ.ಪಂನ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ವಸಂತಿ ಅಧ್ಯಕ್ಷೆಯಾಗಿದ್ದು ಅರುಣ್ ಕುಮಾರ್ ಶೆಟ್ಟಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ 5 ಮತ್ತು 4 ಬಿಜೆಪಿ ಬೆಂಬಲಿತ ಸದಸ್ಯರು ಆಯ್ಕೆಯಾಗಿದ್ದರು. ಹಿಂದುಳಿದ ವರ್ಗ ಮಹಿಳೆ ಮೀಸಲಾತಿಯಲಿಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ವಸಂತಿ, ಬಿಜೆಪಿ ಬೆಂಬಲಿತ ವಿಶಾಲಾಕ್ಷಿ ನಾಮಪತ್ರ ಸಲ್ಲಿಸಿದ್ದರು. ಸಾಮಾನ್ಯ ಪುರುಷ ಮೀಸಲಾತಿಯಡಿ ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರಸ್ ಬೆಂಬಲಿತ ಅರುಣ್ ಕುಮಾರ್ ಶೆಟ್ಟಿ, ಬಿಜೆಪಿ ಬೆಂಬಲಿತ ಗಣೇಶ್ ನಾಮಪತ್ರ ಸಲ್ಲಿಸಿದ್ದರು. ಬಳಿಕ ನಡೆದ ಚುನಾವಣೆಯಲ್ಲಿ ವಸಂತಿ 6 ಮತಗಳನ್ನು ಪಡೆದು ಅಧ್ಯಕ್ಷರಾದರೆ ವಿಶಾಲಾಕ್ಷಿ 3 ಮತಗಳನ್ನು ಪಡೆದು ಪರಾಭವಗೊಂಡರು. ಅರುಣ್ ಕುಮಾರ್ 5 ಮತಗಳನ್ನು ಪಡೆದು ಉಪಾಧ್ಯಕ್ಷರಾದರೆ ಗಣೇಶ್ 4 ಮತಗಳನ್ನು ಪಡೆದು ಪರಾಭವಗೊಂಡರು.
ತಾ.ಪಂ ಸದಸ್ಯ ರುಕ್ಕಯ ಪೂಜಾರಿ, ಸಂಪತ್ ಸಾಮ್ರಾಜ್ಯ, ಶಶಿಧರ್ ಮೊದಲಾದವರು ಉಪಸ್ಥಿತರಿದ್ದರು.
.
