ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಅಮ್ಟೂರು ಗ್ರಾಮದ ಕರಿಂಗಾನ ಎಂಬಲ್ಲಿ ಮಹಿಳೆಯೊಬ್ಬರು ತನ್ನ ಮನೆಯ ಬಚ್ಚಲು ಕೋಣೆಯಲ್ಲಿ ಸ್ನಾನ ಮಾಡುತ್ತಿರುವುದನ್ನು ಇಣುಕಿ ನೋಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಠಾಣೆ ಪೊಲೀಸರಿಂದ ಬಂಧನಕ್ಕೀಡಾದ ಆರೋಪಿಗೆ ಶುಕ್ರವಾರ ಇಲ್ಲಿನ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
ಆರೋಪಿ ಸ್ಥಳೀಯ ನಿವಾಸಿ ಮಹಮ್ಮದ್ ಅಲ್ತಾಫ್ ಎಂಬಾತನ್ನು ನಗರ ಠಾಣೆ ಪೊಲೀಸರು ಗುರುವಾರ ಬಂಧಿಸಿ ಶುಕ್ರವಾರ ಇಲ್ಲಿನ ನ್ಯಾಯಾಲಯಕ್ಕೆ ಹಾಜರುಪಡಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *