ಬಂಟ್ವಾಳ: ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆ ಶಂಭೂರು ಇಲ್ಲಿ ಜು.4ಶನಿವಾರ ನಡೆದ ವನಮಹೋತ್ಸ್ವ ಹಾಗೂ ಲಕ್ಷ ವೃಕ್ಷ ಅಭಿಯಾನ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ 2015-16 ನೇ ಸಾಲಿನ ವಿವಿಧ ವಿದ್ಯಾರ್ಥಿ ಸಂಘಗಳ ಚಟುವಟಿಕೆಗಳು, ಶಾಲಾ ಸಂಸತ್ತು ಹಾಗೂ ನೂತನವಾಗಿ ಆರಂಭಗೊಂಡಿರುವ 8ನೇ ತರಗತಿ ಆಂಗ್ಲ ಮಾಧ್ಯಮ ವಿಭಾಗವನ್ನು ದೀಪ ಬೆಳಗಿಸುವುದರ ಮೂಲಕ ಜಿಲ್ಲಾ ಪಂಚಾಯತ್ ಸದಸ್ಯರಾದ ಮಮತಾ ಡಿ.ಎಸ್. ಗಟ್ಟಿ ಯವರು ಉದ್ಘಾಟಿಸಿದರು.
SVD_0908
ತಾಲೂಕು ಪಂಚಾಯತ್ ಅಧ್ಯಕ್ಷರಾದ ಯಶವಂತ ಡಿ. ತಾಲೂಕು ಪಂ. ಸದಸ್ಯರಾದ ಆನಂದ ಶಂಭೂರು, ಉಪ ಅರಣ್ಯ ಸಂರಕ್ಷಣಾಧಿಕಾರಿ ಹನುಮಂತಪ್ಪ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎ.ಎಸ್.ಅಬ್ಬಾಸ್, ವಲಯ ಅರಣ್ಯಾಧಿಕಾರಿ ಸುಬ್ರಹ್ಮಣ್ಯ ರಾವ್, ರೋಟರಿ ಕ್ಲಬ್ ಅಧ್ಯಕ್ಷ ಪ್ರಕಾಶ್ ಕಾರಂತ್, ನರಿಕೊಂಬು ಗ್ರಾಮ ಪಂಚಾಯತ್‍ನ ನೂತನ ಅಧ್ಯಕ್ಷರಾದ ಯಶೋಧರ, ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಕಾರ್ಯಾಧ್ಯಕ್ಷರಾದ ಬೊಂಡಾಲ ಸಚ್ಚಿದಾನಂದ ಶೆಟ್ಟಿ, ನಾಟಿ ಕೃಷ್ಣರಾಜ ಶೆಟ್ಟಿ, ಪಂ ಸದಸ್ಯರಾದ ಗೀತಾ, ವಿಶಾಲಾಕ್ಷಿ, ಜಯರಾಜ್, ಮುಖ್ಯ ಶಿಕ್ಷಕಿ ಸುಶೀಲಾ, ಶಿಕ್ಷಕರಾದ ಹರಿಪ್ರಸಾದ್, ಚಿನ್ನಪ್ಪ, ಶಂಕರ್, ಸದಾಶಿವ ನಾಯಕ್ ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *