ಬಂಟ್ವಾಳ:ಬಂಟ್ವಾಳ ತಾಲ್ಲೂಕಿನ ಗೋಳ್ತಮಜಲು ಗ್ರಾಮದ ಮುರಬೈಲು ಅಂಚೆ ಕಚೇರಿ ಬಳಿ ತೆರೆದ ಬಾವಿಗೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಕೂಲಿ ಕಾರ್ಮಿಕರೊಬ್ಬರು ಸಾವನ್ನಪ್ಪಿದ ಘಟನೆ ಮಂಗಳವಾರ ನಡೆದಿದೆ.
ಮೃತರನ್ನು ಸ್ಥಳೀಯ ನಿವಾಸಿ ಗೋಪಾಲಕೃಷ್ಣ ನಾಯ್ಕ(38) ಎಂದು ಗುರುತಿಸಲಾಗಿದ್ದು, ಇವರು ಮಂಗಳವಾರ ಬೆಳಿಗ್ಗೆ ಮೂತ್ರಶಂಕೆಗೆ ಹೋಗಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ತೆರದ ಬಾವಿಗೆ ಬಿದ್ದಿದ್ದಾರೆ ಎನ್ನಲಾಗಿದೆ. ತಕ್ಷಣವೇ ಬಂಟ್ವಾಳ ಅಗ್ನಿಶಾಮಕ ದಳ ಸಿಬ್ಬಂದಿ ಧಾವಿಸಿ ಮೇಲೆತ್ತಿದ್ದು, ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದರು ಎಂದು ಬಂಟ್ವಾಳ ನಗರ ಠಾಣೆ ಪೊಲೀಸರು ತಿಳಿಸಿದ್ದಾರೆ.

 

By Suddi9

Leave a Reply

Your email address will not be published. Required fields are marked *