ಸುದ್ದಿ9 ಕೈಕಂಬ: ಗಂಜಿಮಠ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಮಾಲತಿ, ಉಪಾಧ್ಯಕ್ಷರಾಗಿ ಆರ್.ಎಸ್.ಝಕೀರ್ ಆಯ್ಕೆಯಾಗಿದ್ದಾರೆ.
ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‍ನಿಂದ ಸ್ಪರ್ಧಿಸಿದ್ದ ಮಾಲತಿ ಅವರಿಗೆ 21, ಬಿಜೆಪಿಯಿಂದ ಸ್ಪರ್ಧಿಸಿದ್ದ ಹರಿಣಾಕ್ಷಿ ಅವರಿಗೆ 10ಮತಗಳು, ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‍ನಿಂದ ಸ್ಪರ್ಧಿಸಿದ್ದ ಝಕೀರ್‍ಗೆ 20 ಮತ, ಬಿಜೆಪಿಯಿಂದ ಸ್ಪರ್ಧಿಸಿದ್ದ ಜಯಾನಂದ ಕುಲಾಲ್‍ಗೆ 11ಮತಗಳು ಬಿದ್ದವು. ಉಪಾಧ್ಯಕ್ಷ ಸ್ಥಾನಕ್ಕೆ ಒಂದು ಅಡ್ಡ ಮತ ಬಿದ್ದಿದೆ.

DSC_0139
DSC_0129

31 ಗ್ರಾಮ ಪಂಚಾಯತ್ ಸದಸ್ಯರಲ್ಲಿ 17ಕಾಂಗ್ರೆಸ್ ಬೆಂಬಲಿತ, 10 ಬಿಜೆಪಿ, 4 ಪಕ್ಷೇತರರು ಆಯ್ಕೆಯಾಗಿದ್ದಾರೆ. ಇದರಲ್ಲಿ 4 ಪಕ್ಷೇತರರು ಕಾಂಗ್ರೆಸ್‍ಗೆ ಬೆಂಬಲ ನೀಡುವ ಮೂಲಕ ಕಾಂಗ್ರೆಸ್ ಬೆಂಬಲಿತರ ಸದಸ್ಯರ ಸಂಖ್ಯೆ 21ಕ್ಕೆ ಏರಿದೆ. ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮೀಸಲಾತಿಯನ್ನು ನಿಗದಿಪಡಿಸಲಾಗಿತ್ತು .
ಚುನಾವಣಾಧಿಕಾರಿಯಾಗಿ ಸಣ್ಣ ನೀರಾವರಿ ಇಲಾಖೆಯ ಸಹಾಯಕ ಕಾರ್ಯವಾಹ ಎಂಜಿನಿಯರ್ ಷಣ್ಮುಗಂ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಪ್ರಭಾರ ಪಿಡಿಒ ಜಿನ್ನಪ್ಪಗೌಡ ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *