ಬಂಟ್ವಾಳ: ಬಂಟ್ವಾಳ ತಾಲ್ಲೂಕು ಪತ್ರಕರ್ತರ ಸಂಘ (ರಿ.) ಇದರ ನೂತನ ಅಧ್ಯಕ್ಷರಾಗಿ ಯುವ ಪತ್ರಕರ್ತ ಮೋಹನ್ ಕೆ.ಶ್ರೀಯಾನ್ ರಾಯಿ (ಪ್ರಜಾವಾಣಿ )ಇವರು ಆಯ್ಕೆಯಾಗಿದ್ದಾರೆ.
ಪ್ರಧಾನ ಕಾರ್ಯದರ್ಶಿಯಾಗಿ ಪತ್ರಕರ್ತ ಅಬ್ದುಲ್ ಲತೀಫ್ ನೇರಳಕಟ್ಟೆ (ಸಂಯುಕ್ತ ಕರ್ನಾಟಕ), ಗೌರವಾಧ್ಯಕ್ಷರಾಗಿ ಬಂಟ್ವಾಳ ಕಸಾಪ ಅಧ್ಯಕ್ಷ ಜಯಾನಂದ ಪೆರಾಜೆ(ಹೊಸದಿಗಂತ), ಉಪಾಧ್ಯಕ್ಷರಾಗಿ ಹಿರಿಯ ಪತ್ರಕರ್ತ ರಾಜಾ ಬಂಟ್ವಾಳ(ಉದಯವಾಣಿ), ಕೋಶಾಧಿಕಾರಿಯಾಗಿ ವಿಶ್ವನಾಥ ಬಂಟ್ವಾಳ(ವಂಶ), ಜೊತೆ ಕಾರ್ಯದರ್ಶಿಯಾಗಿ ಫಾರೂಕ್ ಬಂಟ್ವಾಳ(ವಿಜಯ ಕರ್ನಾಟಕ), ಪತ್ರಿಕಾ ಛಾಯಾಗ್ರಾಹಕರಾಗಿ ಸತೀಶ ಕುಮಾರ್ (ಕಾರ್ತಿಕ್), ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಶ್ರಫ್ ಪಾಣೆಮಂಗಳೂರು(ಕರಾವಳಿ ಅಲೆ), ಪದ್ಮನಾಭ ಶಂಭೂರು (ವಂಶ) ಇವರನ್ನು ಆಯ್ಕೆಗೊಳಿಸಲಾಗಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.
