ಸುದ್ದಿ 9ರಾಯಿ; ಬಂಟ್ವಾಳ ತಾಲ್ಲೂಕಿನ ರಾಯಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೈತ್ರೋಡಿ ಮತ್ತಿತರ ಕಡೆಗಳಲ್ಲಿ ಸ್ಥಳಿಯ ತಾ.ಪಂ.ಸದಸ್ಯ ವಸಂತ ಕುಮಾರ್ ಅಣ್ಣಳಿಕೆ ನೇತೃತ್ವದಲ್ಲಿ ಸುಮಾರು 50ಕ್ಕೂ ಹೆಚ್ಚು ಮಂದಿ ಬಿಜೆಪಿ ಕಾರ್ಯಕರ್ತರು ಭಾನುವಾರ ಮನೆ ಮನೆಗೆ ಭೇಟಿ ನೀಡಿ ಪಕ್ಷದ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ಪರ ಮತಯಾಚನೆ ನಡೆಸಿದರು.


ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಮಧುಕರ ಬಂಗೇರ, ಉಪಾಧ್ಯಕ್ಷ ಆನಂದ ಪೂಜಾರಿ, ಮಾಜಿ ಅಧ್ಯಕ್ಷ ಜಿ.ದಾಮೋದರ ಬಂಗೇರ, ಸದಸ್ಯ ಪ್ರಶಾಂತ ಶೆಟ್ಟಿ, ಕಾರ್ಯಕರ್ತರಾದ ರವೀಂದ್ರ ಪೂಜಾರಿ, ಹರೀಶ ಪೂಜಾರಿ ಮತ್ತಿತರರು ಇದ್ದರು.
