ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಸಜಿಪಪಡು ಗ್ರಾಮದ ಕುಂಜತ್ತಬೈಲು ಎಂಬಲ್ಲಿ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದ ಪದವೀಧರೆ ಯುವತಿ ನಾಪತ್ತೆಯಾಗಿರುವ ಘಟನೆ ಭಾನುವಾರ ನಡೆದಿದೆ.

ಇಲ್ಲಿನ ನಿವಾಸಿ ನಾಗಪ್ಪ ನಾಯ್ಕ್ ಎಂಬವರ ಪುತ್ರಿ ರೇಖಾ ಪದವೀಧರೆಯಾಗಿದ್ದು ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದರು ಎನ್ನಲಾಗಿದೆ.  ಭಾನುವಾರ ಬೆಳಿಗ್ಗೆ ಸುಮಾರು 11 ಗಂಟೆಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆಕೆ ನಾಪತ್ತೆಯಾಗಿದ್ದಾರೆ ಎಂದು ಆರೋಪಿಸಿ ಬಂಟ್ವಾಳ ಗ್ರಾಮಾಂತರ ಠಾಣೆಗೆ ದೂರು ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *