ಬೆಂಗಳೂರು: ಸರ್ಕಾರಿ ಹುದ್ದೆಯಲ್ಲಿರುವ ಸಾಹಿತಿ ಅನಂತಮೂರ್ತಿ ಅವರು ಗುಲ್ಬರ್ಗದ ಕೇಂದ್ರೀಯ ವಿವಿಯ ಕುಲಪತಿಗಳಾಗಿದ್ದು, ಕಾಂಗ್ರೆಸ್ ಪರ ಪ್ರಚಾರ ಮಾಡುತ್ತಿದ್ದಾರೆ. ಇದರಿಂದ ನೀತಿಸಂಹಿತೆಯ ಉಲ್ಲಂಘನೆಯಾಗುವುದರಿಂದ ಅವರನ್ನು ಆ ಸ್ಥಾನದಿಂದ ಉಚ್ಚಾಟನೆ ಮಾಡಬೇಕು ಎಂದು ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಸರ್ಕಾರಿ ಹುದ್ದೆಯಲ್ಲಿದ್ದು ಒಂದು ಪಕ್ಷದ ಪರ ಪ್ರಚಾರ ಮಾಡುತ್ತಿದ್ದಾರೆ. ನರೇಂದ್ರ ಮೋದಿ ಪ್ರಧಾನಿಯಾದರೆ ಈ ದೇಶದಲ್ಲಿ ತಾವು ಇರುವುದಿಲ್ಲ ಎಂದು ಅನಂತಮೂರ್ತಿ ಹೇಳಿಕೆ ನೀಡಿ ವಿವಾದವನ್ನು ಸೃಷ್ಟಿಸಿದ್ದರು.
ಅನಂತಮೂರ್ತಿ ಸರ್ಕಾರಿ ಹುದ್ದೆಯಲ್ಲಿರುವುದರಿಂದ ಈ ರೀತಿ ಪ್ರಚಾರ ಮಾಡುವುದು ಎಷ್ಟರಮಟ್ಟಿಗೆ ಸರಿ ಎಂದು ಬಿಜೆಪಿ ಪ್ರಶ್ನಿಸಿದೆ. ಬಿಜೆಪಿಯ ವಿರುದ್ಧ ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರಕ್ಕೆ ಗಿರೀಶ್ ಕಾರ್ನಾಡ್, ಅನಂತಮೂರ್ತಿ ಸೇರಿದಂತೆ ಅನೇಕ ಸಾಹಿತಿಗಳು ತೊಡಗಿದ್ದು, ಕೋಮುವಾದಿ ಶಕ್ತಿಗಳ ನಿರ್ಮೂಲನೆಗೆ ಕರೆ ನೀಡಿದ್ದರು.

