ಮಂಗಳೂರು: ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಚಿವ ಯು.ಟಿ.ಖಾದರ್ ಸಂಪೂರ್ಣವಾಗಿ ವಿಫಲರಾಗಿದ್ದು, ಸಚಿವರು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಬಿಜೆಪಿ ಮಂಗಳೂರು ಮಂಡಲ ಒತ್ತಾಯಿಸಿದೆ.
2
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಶಾಸಕ ಕೆ. ಜಯರಾಮ್ ಶೆಟ್ಟಿ, ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಕೋಮು ಸೌಹಾರ್ದ ಕಾಪಾಡುವಲ್ಲಿ ಖಾದರ್ ವಿಫಲರಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಬಿಜೆಪಿ ಮಂಗಳೂರು ಕ್ಷೇತ್ರದ ಅಧ್ಯಕ್ಷ ಚಂದ್ರಶೇಖರ್ ಉಚ್ಚಿಲ್, ದ.ಕ. ಜಿಪಂ ಉಪಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಚಂದ್ರಹಾಸ್ ಉಳ್ಳಾಲ್, ಮಂಗಳೂರು ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಯಶವಂತ ಅಮೀನ್ ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *