ಬಂಟ್ವಾಳ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆಯು ಬಿ.ಸಿ.ರೋಡ್ ಪ್ರೆಸ್ ಕ್ಲಬ್ ನಲ್ಲಿ ಸಂಘದ ಅಧ್ಯಕ್ಷ ಮೌನೇಶ್ ವಿಶ್ವಕರ್ಮ ಅವರ ಅಧ್ಯಕ್ಷತೆಯಲ್ಲಿ ಜು.23ರಂದು ಗುರುವಾರ ನಡೆಯಿತು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ ಮಾತನಾಡಿ, ಬಂಟ್ವಾಳ ಕಾರ್ಯನಿರತ ಪತ್ರಕರ್ತರ ಸಂಘವು ವಿವಿಧ ಸಾಮಾಜಿಕ ಚಟುವಟಿಕೆಗಳೊಂದಿಗೆ ಸಕ್ರೀಯವಾಗಿದ್ದು, ಇಂತಹ ಕಾರ್ಯಗಳಿಗೆ ಜಿಲ್ಲಾ ಸಂಘವೂ ನಿರಂತರ ಪ್ರೋತ್ಸಾಹ ನೀಡುತ್ತದೆ ಎಂದರು.
ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಇಂದಾಜೆ, ಕಾರ್ಯದರ್ಶಿ ವೆಂಕಟೇಶ್ ಬಂಟ್ವಾಳ, ಕೋಶಾಧಿಕಾರಿ ಇಬ್ರಾಹಿಂ ಅಡ್ಕಸ್ಥಳ, ಸದಸ್ಯ ಹರೀಶ್ ಮಾಂಬಾಡಿ, ಮುಂಬೈ ಕನ್ನಡಿಗರ ಪತ್ರಕರ್ತರ ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ರೋನ್ಸ್ ಬಂಟ್ವಾಳ ಅತಿಥಿಗಳಾಗಿ ಭಾಗವಹಿಸಿದ್ದರು. ಉಪಾಧ್ಯಕ್ಷ ಸೂರ್ಯನಾರಾಯಣ ಪೂವಳ, ಜತೆ ಕಾರ್ಯದರ್ಶಿ ಚಂದ್ರಶೇಖರ ಕಲ್ಮಲೆ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮುಂದಿನ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಬಂಟ್ವಾಳ ಪ್ರೆಸ್ ಕ್ಲಬ್ ಟ್ರಸ್ಟ್ ನ್ನು ನೂತನವಾಗಿ ಅಸ್ತಿತ್ವಗೊಳಿಸಲಾಯಿತು.
ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರ.ಕಾರ್ಯದರ್ಶಿ ರತ್ನದೇವ್ ಪುಂಜಾಲಕಟ್ಟೆ ಅವರು ಸ್ವಾಗತಿಸಿ, ವರದಿ ವಾಚಿಸಿದರು. ಕೋಶಾಧಿಕಾರಿ ಸಂದೀಪ್ ಸಾಲ್ಯಾನ್ ಲೆಕ್ಕಪತ್ರ ಮಂಡಿಸಿದರು. ನಿಯೋಜಿತ ಕಾರ್ಯದರ್ಶಿ ನಿಶಾಂತ್ ಬಿಲ್ಲಂಪದವು ವಂದಿಸಿದರು.





