ಮೂಡುಬಿದರೆ: ಆಳ್ವಾಸ್ ಕಾಲೇಜು ಆಫ್ ನರ್ಸಿಂಗ್ ಪ್ರಾಂಶುಪಾಲ ಪ್ರೊ.ಬಿ.ಎ.ಯತಿಕುಮಾರ ಸ್ವಾಮಿ ಗೌಡ ಅವರು ಯೆನಪೊಯ ವಿ.ವಿ.ಯಿಂದ ಡಾಕ್ಟರೇಟ್ ಪದವಿಯನ್ನು ಪಡೆದಿದ್ದಾರೆ.

ಮಧ್ಯ ವಯಸ್ಕರಲ್ಲಿ ಕಂಡುಬರುವ ಅತಿಯಾದ ತೂಕ ಹಾಗೂ ಬೊಜ್ಜುತನದ ಬಗ್ಗೆ ಅರಿವನ್ನು ಮೂಡಿಸುವುದರ ಜೊತೆಗೆ ಅವರಲ್ಲಿಯ ಜೀವನ ಶೈಲಿಯ ಕುರಿತು ಮಂಡಿಸಿದ ಪ್ರಬಂಧಕ್ಕಾಗಿ ಅವರು ಡಾಕ್ಟರೇಟ್ ಪದವಿಯನ್ನು ಪಡೆದಿದ್ದಾರೆ.
ಶ್ರೀನಿವಸ ವೈದ್ಯಕೀಯ ಮಹಾವಿದ್ಯಾಲಯದ ವೈದ್ಯಕೀಯ ವಿಭಾಗದ ಮುಖ್ಯಸ್ಥ ಪ್ರೊ.ಡಾ.ಅಶೋಕ್ ನಾಯಕ್ ಮಾರ್ಗದರ್ಶನ ನೀಡಿದ್ದರು.
