ಬಂಟ್ವಾಳ: ಪ್ರಸಕ್ತ ಸಮಾಜದಲ್ಲಿ ಬಹುತೇಕ ಎಲ್ಲ ಕ್ಷೇತ್ರಗಳಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಅನಿವಾರ್ಯವಾಗಿ ಬೆಳೆಯುತ್ತಿದ್ದು, ಇದರಿಂದಾಗಿ ವಿದ್ಯಾರ್ಥಿಗಳು  ಶಿಕ್ಷಣದ ಜೊತೆಗೆ ವೈಜ್ಞಾನಿಕ ವಿಷಯಗಳ ಬಗ್ಗೆಯೂ ಆಸಕ್ತಿ ವಹಿಸುವ ಅಗತ್ಯತೆ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

27btl-Rai
ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸೋಮವಾರ ಆರಂಭಗೊಂಡ ವಿಜ್ಞಾನ ವಿಭಾಗ ಮತ್ತು ಎನ್ಎಸ್ಎಸ್ ಘಟಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಬಂಟ್ವಾಳ ಪುರಸಭಾ ಅಧ್ಯಕ್ಷೆ ವಸಂತಿ ಚಂದಪ್ಪ, ಸ್ಥಳೀಯ ಪುರಸಭಾ ಸದಸ್ಯ ಮಹಮ್ಮದ್ ಇಕ್ಬಾಲ್, ಜಿಲ್ಲಾ ಪಂಚಾಯಿತಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಬೂಡಾ ಅಧ್ಯಕ್ಷ ಪಿಯೂಸ್ ಎಲ್.ರಾಡ್ರಿಗಸ್, ಕ್ಷೇತ್ರ ಶಿಕ್ಷಣಾಧಿಕಾರಿ ಶೇಷಶಯನ ಕಾರಿಂಜ ಮತ್ತಿತರರು ಶುಭ ಹಾರೈಸಿದರು.
ದೆಹಲಿ ತಾಜ್ ಎಂಜಿನಿಯರಿಂಗ್ನ ವ್ಯವಸ್ಥಾಪಕ ನಿರ್ದೇಶಕ ಹರಿ ನಾಯರ್, ಮಂಗಳೂರು ಯೆನಪೋಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ. ಮಂಜುನಾಥ್ ವಿಶೇಷ ಉಪನ್ಯಾಸ ನೀಡಿದರು. ಇದೇ ವೇಳೆ ಜಿಲ್ಲಾ ಪದವಿಪೂರ್ವ ಕಾಲೇಜು ಪ್ರಾಚಾರ್ಯರ ಸಂಘದ ನೂತನ ಅಧ್ಯಕ್ಷೆಯಾಗಿ ಆಯ್ಕೆಯಾದ ಪ್ರಾಂಶುಪಾಲೆ ಸರಸ್ವತಿ ಬಿ. ಇವರನ್ನು ಸಚಿವರು ಅಭಿನಂಧಿಸಿದರು. ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಪ್ರೇಮ್ ಪ್ರಕಾಶ್ ಡಿಕ್ರೂಸ್, ಸದಸ್ಯರಾದ ಜಗದೀಶ್ ಕುಂದರ್, ಉಮೇಶ ಬೋಳಂತೂರು, ಪಿ.ಎಸ್ ಅಬ್ದುಲ್ ಹಮೀದ್, ಮಹಮ್ಮದ್ ರಫೀಕ್ ಆಲಡ್ಕ, ಆನಂದ ಸಾಲ್ಯಾನ್, ಸತೀಶ್ ಕುಲಾಲ್, ಲತೀಫ್ ಖಾನ್, ರಮೇಶ್ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
ಪ್ರಾಂಶುಪಾಲೆ ಸರಸ್ವತಿ ಭಟ್ ಸ್ವಾಗತಿಸಿ, ಉಪನ್ಯಾಸಕ ಯೂಸುಫ್ ವಂದಿಸಿದರು. ಉಪನ್ಯಾಸಕಿ ಯಶೋಧಾ ಕೆ. ಕಾರ್ಯಕ್ರಮ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *