ಬಂಟ್ವಾಳ: ಪಾಣೆಮಂಗಳೂರು ಅಲ್ಪಸಂಖ್ಯಾತರ ವಿಭಾಗದ ವತಿಯಿಂದ ದಿ.ಬೊಂಡಾಲ ಜಗನ್ನಾಥ ಶೆಟ್ಟಿಯವರ ತೃತೀಯ ವರ್ಷದ ಪುಣ್ಯತಿಥಿಯಂದು ಸರಕಾರಿ ಆಸ್ಪತ್ರೆಯ ಬಡರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು.

ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಅಬ್ಬಾಸ್ ಆಲಿ, ಪಾಣೆಮಂಗಳೂರು ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಅಲ್ಬರ್ಟ್ ಮೆನೆಜಸ್ , ಮಾಜಿ ತಾ.ಪಂ.ಅಧ್ಯಕ್ಷ ಪದ್ಮನಾಭ ರೈ , ನರಿಕೊಂಬು ವಲಯ ಕಾಂಗ್ರೆಸ್ ಅಧ್ಯಕ್ಷ ಉಮೇಶ್ ಬೋಳಂತೂರು, ಆರೋಗ್ಯಾಧಿಕಾರಿ ರಾಧಿಕಾ ಕೆ., ಗ್ರಾ.ಪಂ.ಮಾಜಿ ಸದಸ್ಯ ಕೃಷ್ಣಪ್ಪ ಪೂಜಾರಿ ನಾಟಿ , ದ.ಕ.ಜಿಲ್ಲಾ ಇಂಟಕ್ ಪ್ರಧಾನ ಕಾರ್ಯದರ್ಶಿ ಚಿತ್ತರಂಜನ್ ಶೆಟ್ಟಿ ಬೊಂಡಾಲ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
