ವಿಟ್ಲ:ಹಳೆ ಪ್ರಕರಣವೊಂದರಲ್ಲಿ ಭಾಗಿಯಾಗಿ,ನ್ಯಾಯಾಲಯಕ್ಕೆ ಹಾಜರಾಗದೆ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಖಚಿತ ಮಾಹಿತಿ ಮೇರೆಗೆ ವಿಟ್ಲ ಪೊಲೀಸರ ತಂಡ ಮಾಣಿ ಸಮೀಪದ ಬುಡೋಳಿಯಲ್ಲಿ ಬುಧವಾರ ಬಂಧಿಸಿದೆ.

ಬುಡೋಳಿ ಸಮೀಪದ ಮಡಲ ನಿವಾಸಿಅನ್ಸರ್ (22) ಬಂಧಿತ ವ್ಯಕ್ತಿಯಾಗಿದ್ದಾನೆ. 2007ರ ಅಗಸ್ಟ್ 28ರಂದು ಬುಡೋಳಿ ಪೆರಾಜೆಯಲ್ಲಿ ನಡೆದ ಗಲಭೆಯಲ್ಲಿ ಸುಮಾರು 15 ಮಂದಿಯ ಮೇಲೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳು ನ್ಯಾಯಾಲಯಕ್ಕೂ ಹಾಜರಾಗದೆ ತಲೆಮರೆಸಿಕೊಂಡಿದ್ದುದರಿಂದ ವಾರೆಂಟ್ ಜಾರಿಯಾಗಿತ್ತು. ತಲೆಮರೆಸಿಕೊಂಡಿದ್ದ ಅನ್ಸರ್ ಬೆಂಗಳೂರಿನಿಂದ ಊರಿಗೆ ಬಂದಿರುವ ಖಚಿತ ಮಾಹಿತಿ ಮೇರೆಗೆ ಬುಧವಾರ ಬೆಳಗ್ಗೆ ಬುಡೋಳಿಯಲ್ಲಿ ವಿಟ್ಲ ಪೊಲೀಸರ ತಂಡ ಕಾರ್ಯಚರಣೆಗೆ ಮುಂದಾಗಿದ್ದಾರೆ. ಪೊಲೀಸರನ್ನು ಕಾಣುತ್ತಿದ್ದಂತೆ ತಪ್ಪಿಸಿಕೊಂಡಲು ಓಡಲುಅನ್ಸಾರ್ ಯತ್ನಿಸಿದ್ದು, ಪೊಲೀಸರು ಆತನನ್ನು ಬೆನ್ನತ್ತಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.
ಬಂಟ್ವಾಳ ವೃತ್ತ ನಿರೀಕ್ಷಕ ಬೆಳ್ಳಿಯಪ್ಪ ಅವರ ಮಾರ್ಗದರ್ಶನದಲ್ಲಿ ವಿಟ್ಲ ಪೊಲೀಸ್ ಠಾಣೆಯ ಉಪನಿರೀಕ್ಷಕ ಪ್ರಕಾಶ್ ದೇವಾಡಿಗ, ಸಿಬ್ಬಂದಿಗಳಾದ ಪ್ರವೀಣ್ ರೈ, ಜನಾರ್ಧನ, ರಕ್ಷಿತ್ ರೈ, ಚಾಲಕ ನಾರಾಯಣ ಕಾಯರ್ಾಚರಣೆಯಲ್ಲಿ ಭಾಗವಹಿಸಿದ್ದರು.
