ಬಂಟ್ವಾಳ:ಬಂಟ್ವಾಳ ತಾಲ್ಲೂಕಿನ ಸಿದ್ಧಕಟ್ಟೆ ಪೇಟೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಯೊಬ್ಬರಿಗೆ ಡಿಕ್ಕಿ ಹೊಡೆದು ಬಳಿಕ ಹಲ್ಲೆ ನಡೆಸಿ ಪರಾರಿಯಾದ ಘಟನೆ ಗುರುವಾರ ನಡೆದಿದೆ. ಇಲ್ಲಿನ ಸಂಗಬೆಟ್ಟು ನಿವಾಸಿ ಸುದರ್ಶನ್ ಎಂಬವರು ಸಿದ್ಧಕಟ್ಟೆ ರಸ್ತೆಯಲ್ಲಿ ಗುರುವಾರ ಬೆಳಿಗ್ಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಬಂಟ್ವಾಳದಿಂದ ಮೂಡುಬಿದ್ರೆ ಕಡೆಗೆ ಹೋಗುತ್ತಿದ್ದ ಕಾರೊಂದು ಡಿಕ್ಕಿ ಹೊಡೆದಿದೆ. ಇದೇ ವೇಳೆ ಕಾರಿನ ಚಾಲಕ ಮತ್ತು ಗಾಯಾಳು ಸುದರ್ಶನ್ ನಡುವೆ ಪರಸ್ಪರ ಮಾತಿನ ಚಕಮಕಿ ನಡೆಯಿತು. ಇದೇ ವೇಳೆ ಕಾರಿನ ಚಾಲಕ ಸುದರ್ಶನ್ ಅವರಿಗೆ ಅವಾಚ್ಯಚಾಗಿ ನಿಂದಿಸಿ ಹಲ್ಲೆ ನಡೆಸಿ ಕಾರಿನಲ್ಲಿ ಮೂಡುಬಿದ್ರೆ ಕಡೆಗೆ ಪರಾರಿಯಾಗಿದ್ದಾನೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿದ್ದಾರೆ

By Suddi9

Leave a Reply

Your email address will not be published. Required fields are marked *