ಬಂಟ್ವಾಳ:ಪ್ರಾಕೃತಿಕ ವಿಕೋಪದಿಂದ ವಾಸ್ತವ್ಯದ ಮನೆ ಹಾನಿಗೀಡಾಗಿ ನಷ್ಟ ಸಂಭವಿಸಿದ ಕುಟುಂಬಗಳಿಗೆ ಕಂದಾಯ ಇಲಾಖೆಯಿಂದ ಮಂಜೂರು ಮಾಡಿದ ಪರಿಹಾರ ಮೊತ್ತವನ್ನು ಅರಣ್ಯ, ಪರಿಸರ, ಜೀವಿಶಾಸ್ತ್ರ ಸಚಿವ ಬಿ.ರಮಾನಾಥ ರೈ ವಿತರಿಸಿದರು.
ವಿಟ್ಲ ಹೋಬಳಿಯ 15 ಮಂದಿ, ಪಾಣೆಮಂಗಳೂರು ಹೋಬಳಿಯ 12 ಮಂದಿ ಫಲಾನುಭವಿಗಳಿಗೆ ಒಟ್ಟು ರೂ.9.16 ಲಕ್ಷ ಪರಿಹಾರ ಮೊತ್ತವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಬೂಡ ಅಧ್ಯಕ್ಷ ಪಿಯೂಸ್ ಎಲ್ ರೊಡ್ರಿಗಸ್, ಬಂಟ್ವಾಳ ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷೆ ಐಡಾಸುರೇಶ್, ತಾಲೂಕು ಪಂಚಾಯತ್ ಸದಸ್ಯ ಪದ್ಮಶೇಖರ್ ಜೈನ್, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲಿಯಾನ್, ಅಬ್ಬಾಸ್ ಅಲಿ, ತಾಲೂಕು ತಹಶೀಲ್ದಾರ್ ಪುರಂದರ ಹೆಗ್ಡೆ, ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ನಾರಾಯಣ ಪೂಜಾರಿ ಸ್ವಾಗತಿಸಿ ವಿಟ್ಲ ಹೋಬಳಿ ಕಂದಾಯ ನಿರೀಕ್ಷಕ ದಿವಾಕರ ವಂದಿಸಿದರು.
