ಬಂಟ್ವಾಳ: ಸಾರ್ವಜನಿಕ ಶಿಕ್ಷಣ ಇಲಾಖೆಯು ಏರ್ಪಡಿಸುವ 2015-16 ನೇ ಸಾಲಿನ ಬಂಟ್ವಾಳ ತಾಲೂಕು ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ಹಾಗೂ ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆ ಶಂಭೂರು ಇವರ ಸಹಯೋಗದೊಂದಿಗೆ ಆ.11 ಮಂಗಳವಾರ ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆ ಶಂಭೂರು ಇಲ್ಲಿ ಡಾ| ಎ.ಪಿ.ಜೆ ಅಬ್ದುಲ್ ಕಲಾಂ ವಿಜ್ಞಾನ ವೇದಿಕೆಯಲ್ಲಿ ಜರುಗಿತು. ತಾಲೂಕು ಪಂಚಾಯತ್ ಸದಸ್ಯರಾದ ಆನಂದ ಎ ಶಂಭೂರು ಇವರು ಬ್ಯಾಂಡ್ ಬಾರಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶೇಷಶಯನ ಕಾರಿಂಜ ಇವರು ಇಲಾಖೆಯು ಏರ್ಪಡಿಸುವ ವಿಜ್ಞಾನದ ಎಲ್ಲಾ ಸ್ಫರ್ಧೆಗಳಲ್ಲಿ ಭಾಗವಹಿಸುವುದರ ಮೂಲಕ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಸಾಧ್ಯವಾಗುತ್ತದೆ ಮತ್ತು ಇದರಿಂದ ಮುಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸನ್ನು ಗಳಿಸಬಹುದು ಎನ್ನುತ್ತಾ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ನರಿಕೊಂಬು ಪಂಚಾಯತ್ ಸದಸ್ಯರಾದ ಜಯರಾಜ್, ಶಿಕ್ಷಣ ಸಂಯೋಜಕರಾದ ಸುಜಾತ, ಸುಜಾತಕುಮಾರಿ ಇವರು ಉಪಸ್ಥಿತರಿದ್ದರು. ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷರಾದ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಇವರು ಅಧ್ಯಕ್ಷ ಸ್ಥಾನವನ್ನು ವಹಿಸಿ ಇಲಾಖೆಯ ಯಾವುದೇ ಕಾರ್ಯಕ್ರಮಗಳಿಗೆ ತಮ್ಮ ಸಹಕಾರ ಯಾವಾಗಲೂ ಇರುತ್ತದೆ ಎನ್ನುತ್ತಾ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಪುತ್ತೂರು ಕ್ಷೇತ್ರ ಸಂಪನ್ಮೂಲ ಕೇಂದ್ರದ ತಾರಾನಾಥ ಸವಣೂರು, ಸರಕಾರಿ ಪ್ರೌಢಶಾಲೆ ಕೊಯಿಲದ ಅಧ್ಯಾಪಕರಾದ ಸುಧೀರ್, ಹಾಗೂ ಅಮ್ಟೂರು ಕೆದಿಲ ಪ್ರಾಥಮಿಕ ಶಾಲೆಯ ಸುರೇಶ್ ಮಾಸ್ತರ್ ಇವರು ನಿರ್ಣಾಯಕರಾಗಿ ಕಾರ್ಯ ನಿರ್ವಹಿಸಿದರು. ಶಾಲಾ ಮುಖ್ಯ ಶಿಕ್ಷಕಿ ಸುಶೀಲ ಸ್ವಾಗತಿಸಿ ವಿಜ್ಞಾನ ಅಧ್ಯಾಪಕರಾದ ಶಂಕರ್ ಧನ್ಯವಾದಗೈದರು. ಹರಿಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು. ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಪೋಷಕರು, ಶಿಕ್ಷಕರಾದ ಚಿನ್ನಪ್ಪ, ಪ್ರಕಾಶ್ ಕಮಲಾಕ್ಷ, ಸದಾಶಿವ ನಾಯಕ್ ವರಮಹಾಲಕ್ಷ್ಮಿ ಹಾಗೂ ಸ್ಫರ್ಧೆಯಲ್ಲಿ ಬಾಗವಹಿಸಿದ ತಾಲೂಕಿನ ಒಟ್ಟು ಹತ್ತು ಪ್ರೌಢಶಾಲೆಗಳ ಸ್ಪರ್ಧಾರ್ಥಿಗಳು, ಮಾರ್ಗದರ್ಶಿ ಶಿಕ್ಷಕರು ಉಪಸ್ಥಿತರಿದ್ದರು. ಸ್ಪರ್ಧೆಯಲ್ಲಿ ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆ ಶಂಭೂರಿನ ವಿದ್ಯಾರ್ಥಿಗಳ ತಂಡವು ಪ್ರಥಮ ಸ್ಥಾನವನ್ನು , ಎಸ್.ವಿ ಎಸ್. ದೇವಳ ಪ್ರೌಢಶಾಲೆಯ ವಿದ್ಯಾರ್ಥಿಗಳ ತಂಡವು ದಿತೀಯ ಸ್ಥಾನವನ್ನು ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ಬೆಂಜನಪದವು ಇಲ್ಲಿಯ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳ ತಂಡವು ತೃತೀಯ ಸ್ಥಾನವನ್ನು ಪಡೆದುಕೊಂಡರು.
