ಬಂಟ್ವಾಳ: ದ ಕ ಜಿ ಪ ಹಿ ಪ್ರಾ ಶಾಲೆ ಪಡಿಬಾಗಿಲು ಇಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ ನಡೆಸಲಾಯಿತು.
ಈ ಕಾರ್ಯಕ್ರಮ ದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಪ್ರಭಾಕರ ಶೆಟ್ಟಿ ಆಟಿ ತಿಂಗಳಲ್ಲಿ ಮಾಡುವ ತಿಂಡಿ-ತಿನಿಸುಗಳ ಕುರಿತು ಮತ್ತು ಆಟಿತಿಂಗಳಲ್ಲಿ ಆಚರಿಸುವ ಹಬ್ಬಗಳ ಬಗ್ಗೆ ಮಾತಾಡಿದರು. ಅಧ್ಯಕ್ಷತೆ ಎಸ್ ಡಿ ಎಂ ಸಿ ಅಧ್ಯಕ್ಷ ಬಾಲಕೃಷ್ಣ ಕಾರಂತ ವಹಿಸಿದ್ದರು. ವಿದ್ಯಾರ್ಥಿಗಳು ಆಟಿ ತಿಂಗಳಲ್ಲಿ ಮಾಡುವ ವಿವಿಧ ತಿಂಡಿ ತಿನಿಸುಗಳನ್ನು ಪ್ರದರ್ಶಿಸಿದರು. ವಿದ್ಯಾರ್ಥಿಗಳಿಗೆ ವಿವಿಧ ಗಿಡ ಮೂಲಿಕೆಗಳ ಪರಿಚಯವನ್ನು ಈ ಸಂದರ್ಭದಲ್ಲಿ ಮಾಡಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಶಶಿಕಲಾ ಎನ್ ಸ್ವಾಗತಿಸಿ, ಪ್ರಸ್ತಾವಿಸಿದರು. ಸಹ ಶಿಕ್ಷಕಿ ಲಲಿತಾ ವಂದಿಸಿದರು. ವಿದ್ಯಾರ್ಥಿನಿ ಬದ್ರುನ್ನೀಸ ನಿರೂಪಿಸಿದರು. ಎಸ್ ಡಿ ಎಂ ಸಿ ಸದಸ್ಯರು, ಶಿಕ್ಷಕರು, ಪೋಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
