ಮೂಡುಬಿದರೆ: ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ವತಿಯಿಂದ ಆಟಿ ಕಷಾಯವನ್ನು ದ್ರವ್ಯಗುಣ ಸ್ನಾತಕೋತ್ತರ ವಿಭಾಗದ ನೇತೃತ್ವದಲ್ಲಿ ಕ್ರಮಬದ್ಧವಾಗಿ ತಯಾರಿಸಿ ಸಾರ್ವಜನಿಕರಿಗೆ ವಿತರಿಸಲಾಯಿತು.
ಸುಮಾರು 2000 ಕ್ಕಿಂತಲೂ ಅಧಿಕ ಸಂಖ್ಯೆಯಲ್ಲಿ ಸಾರ್ವಜನಿಕರು ಇದರ ಪ್ರಯೋಜನವನ್ನು ಪಡೆದರು. ಕಾಲೇಜಿನ ಪ್ರಾಂಶುಪಾಲ ಡಾ.ಬಿ.ವಿನಯಚಂದ್ರ ಶೆಟ್ಟಿ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ನಡೆಯಿತು.
