ಬಂಟ್ವಾಳ:ಸರ್ಕಾರಿ ಶಾಲೆಯಲ್ಲಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಸಹಿತ ಗುಣಮಟ್ಟದ ಶಿಕ್ಷಣ ದೊರೆತಾಗ ಆಂಗ್ಲ ಮಾಧ್ಯಮ ಶಾಲೆಯ ವ್ಯಾಮೋಹ ನಾಗರಿಕರಿಂದ ಸ್ವತಃ ದೂರವಾಗುತ್ತದೆ. ಇಲ್ಲಿನ ಕರೆಂಕಿ ದುರ್ಗಾ ಫ್ರೆಂಡ್ಸ್ ಕ್ಲಬ್ ವತಿಯಿಂದ ಈಗಾಗಲೇ ಹೆಚ್ಚುವರಿ ಶಿಕ್ಷಕಿಯರನ್ನು ನೇಮಿಸಲಾಗಿದ್ದು, ಇದರಿಂದಾಗಿ ಸರ್ಕಾರಿ ಶಾಲೆಯಲ್ಲೇ ಆಂಗ್ಲ ಮಾಧ್ಯಮ ಶಿಕ್ಷಣವೂ ದೊರೆತಂತಾಗುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶೇಷಶಯನ ಕಾರಿಂಜ ಹೇಳಿದ್ದಾರೆ.
ಬಂಟ್ವಾಳ ತಾಲ್ಲೂಕಿನ ದಡ್ಡಲಕಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸ್ಥಳೀಯ ಕರೆಂಕಿ ದುರ್ಗಾ ಫ್ರೆಂಡ್ಸ್ ಕ್ಲಬ್ ನೇತೃತ್ವದಲ್ಲಿ ವಿವಿಧ ಖಾಸಗಿ ಆಂಗ್ಲ ಮಾಧ್ಯಮ ಶಾಲೆ ತೊರೆದು 30 ಮಂದಿ ವಿದ್ಯಾರ್ಥಿಗಳ ಸೇರ್ಪಡೆ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.

DSC_0130
17btl-Daddalkadu
ಸಂಘದ ಅಧ್ಯಕ್ಷ ಪ್ರಕಾಶ್ ಅಂಚನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ಬಾರಿ ನಾನು ಸ್ವತಃ ನನ್ನ ಇಬ್ಬರು ಮಕ್ಕಳನ್ನು ಆಂಗ್ಲ ಮಾದ್ಯಮ ಶಾಲೆ ತೊರೆದು ಈ ಸರ್ಕಾರಿ ಶಾಲೆಗೆ ಸೇರ್ಪಡೆಗೊಳಿಸಿದ್ದು, ಮುಂಬರುವ ವರ್ಷದಲ್ಲಿ ಮತ್ತಷ್ಟು ಮಕ್ಕಳು ಸರ್ಕಾರಿ ಶಾಲೆಯನ್ನು ನೆಚ್ಚಿಕೊಳ್ಳಲಿದ್ದಾರೆ ಎಂದರು.
ಗ್ರಾ.ಪಂ. ಅಧ್ಯಕ್ಷೆ ಸುಮಿತ್ರ, ಸದಸ್ಯರಾದ ರೂಪಶ್ರೀ, ಸಂಜೀವ ಪೂಜಾರಿ, ಕೇಶವ ಗೌಡ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪೂವಪ್ಪ ಮೆಂಡನ್, ಪ್ರಮುಖರಾದ ಹರೀಶ್ ಕುಲಾಲ್, ರಾಮಣ್ಣ ಕುಲಾಲ್, ಮಾಜಿ ಅಧ್ಯಕ್ಷ ಲೋಕನಾಥ ಪೂಜಾರಿ, ಮುಖ್ಯಶಿಕ್ಷಕ ಮೌರೀಶ್ ಮತ್ತಿತರರು ಉಪಸ್ಥಿತರಿದ್ದರು.
ಕಲಾವಿದ ಪುರುಷೋತ್ತಮ ಅಂಚನ್ ಸ್ವಾಗತಿಸಿ, ಶಿಕ್ಷಕಿ ಹಿಲ್ಡಾ ವಂದಿಸಿದರು.

By Suddi9

Leave a Reply

Your email address will not be published. Required fields are marked *