ಬಂಟ್ವಾಳ: ಕರ್ನಾಟಕದ ಆರೋಗ್ಯ ಸಚಿವ ಯು.ಟಿ.ಖಾದರ್ , ಕರ್ನಾಟಕದ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ ಸಿಂಗ್ ಹಾಗೂ ಕೆಪಿಸಿಸಿ ಕಾರ್ಮಿಕ ಘಟಕದ ಅಧ್ಯಕ್ಷ ಎಸ್.ಎಸ್.ಪ್ರಕಾಶಂ ಹಾಗೂ ಉಪಾಧ್ಯಕ್ಷ ಕೆ.ಎಸ್.ಅಮೀರ್ ಅಹ್ಮದ್ ತುಂಬೆ , ಕಾರ್ಯದರ್ಶಿ ಮಮತಾ ರವರು ನವದೆಹಲಿಯಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯವರಿಗೆ ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿಯವರ 71ನೇ ಜನ್ಮದಿನದ ರಾಜೀವ್ ಗಾಂಧಿ ಸದ್ಭಾವನಾ ಯಾತ್ರಾ ಜ್ಯೋತಿಯನ್ನು ಹಸ್ತಾಂತರಿಸಿದರು.

