ಸುದ್ದಿ9 ಬಂಟ್ವಾಳ: ಪಿಕ್ಅಪ್ ವಾಹನ ಡಿಕ್ಕಿಯಾಗಿ ಮಹಿಳೆ ಮೃತಪಟ್ಟ ಘಟನೆ ಫರಂಗಿಪೇಟೆಯಲ್ಲಿ ಶುಕ್ರವಾರ ಸಂಜೆ ನಡೆದಿದೆ. ಸ್ಥಳೀಯ ನಿವಾಸಿ ಆಸೀಯಮ್ಮ ಮೃತ ಮಹಿಳೆ. ಆಸೀಯಮ್ಮ ರಸ್ತೆ ದಾಟಲೆಂದು ಡಿವೈಡರ್ ಬಳಿ ನಿಂತಿದ್ದಾಗ ಬಿ.ಸಿ.ರೋಡಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಪಿಕ್ಅಪ್ ವಾಹನ ಡಿಕ್ಕಿ ಹೊಡೆದು ಇನ್ನೊಂದು ಕಾರಿಗೂ ಡಿಕ್ಕಿಯಾಗಿದೆ. ರಸ್ತೆಗೆ ಎಸೆಯಲ್ಪಟ್ಟ ಆಸೀಯಮ್ಮರ ಮುಖ ಹಾಗೂ ಮೈ ಭಾಗಗಳಿಗೆ ಗಂಭೀರ ಗಾಯಗಳಾಗಿದ್ದು ತಕ್ಷಣ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಯಿತಾದರೂ ದಾರಿ ಮಧ್ಯೆ ಕೊನೆಯುಸಿರೆಳೆದಿರುವುದಾಗಿ ತಿಳಿದು ಬಂದಿದೆ. ಅತೀ ವೇಗ ಹಾಗೂ ನಿರ್ಲಕ್ಷದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
