ಬಂಟ್ವಾಳ: ಬಂಟ್ವಾಳ ತಾಲ್ಲೂಕು ಪತ್ರಕರ್ತರ ಸಂಘದ ಬೆಳ್ಳಿಹಬ್ಬ ಪ್ರಯುಕ್ತ ಇದೇ 25ರಂದು ಸಂಜೆ 4ಗಂಟೆಗೆ ಬಿ.ಸಿ.ರೋಡ್ನ ಡಾ.ಬಿ.ಶ್ರೀನಿವಾಸ್ ರಾವ್ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ.
ಈ ಸಭೆಯಲ್ಲಿ ತಾಲ್ಲೂಕಿನ ಎಲ್ಲಾ ಪತ್ರಕರ್ತರು, ಹವ್ಯಾಸಿ ಬರಹಗಾರರು, ಲೇಖಕರು ಮತ್ತು ಸಾಹಿತ್ಯಾಸಕ್ತರು ಭಾಗವಹಿಸುವಂತೆ ಸಂಘದ ಅಧ್ಯಕ್ಷ ಮೋಹನ್ ಕೆ.ಶ್ರೀಯಾನ್ ರಾಯಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
