ಬಂಟ್ವಾಳ: ಲಯನ್ಸ್ ಕ್ಲಬ್ ಮತ್ತು ಲಯನೆಸ್ ಕ್ಲಬ್ ಬಂಟ್ವಾಳ, ಲಯನ್ಸ್ ಸೇವಾ ಟ್ರಸ್ಟ್ (ರಿ.) ಬಂಟ್ವಾಳ ಇದರ ಆಶ್ರಯದಲ್ಲಿ ಮಂಗಳೂರು ಕೆ.ಎಂ.ಸಿ. ಆಸ್ಪತ್ರೆಯ ತಜ್ಞ ವೈದ್ಯರ ತಂಡದವರಿಂದ ಆ.16 ಆದಿತ್ಯವಾರ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಶೇರಾ ಮಾಣಿಯಲ್ಲಿ ಸಾರ್ವಜನಿಕ ಉಚಿತ ಆರೋಗ್ಯ ಹಾಗೂ ಕಣ್ಣು ತಪಾಸಣಾ ಶಿಬಿರವನ್ನು ದ.ಕ. ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
Shera Campವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಲಯನ್ಸ್ ಪ್ರಾಂತೀಯ ಅಧ್ಯಕ್ಷರಾದ ಲಯನ್ ದಾಮೋದರ ಬಿ. ಎಂ. ಲಯನ್ಸ್ ಕ್ಲಬ್ ಬಂಟ್ವಾಳದ ಅಧ್ಯಕ್ಷರಾದ ಲಯನ್ ಜಯಂತ ಶೆಟ್ಟಿ, ಲಯನೆಸ್ ಅಧ್ಯಕ್ಷರಾದ ಗೀತಾ ಜೆ. ಶೆಟ್ಟಿ, ತಾ.ಪಂ. ಸದಸ್ಯೆ ಶ್ರೀಮತಿ ಕಮಲಾಕ್ಷಿ ಪೂಜಾರಿ, ಕಡೇಶ್ವಾಲ್ಯ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಶ್ಯಾಮಲಾ ಶೆಟ್ಟಿ, ಮಾಣಿ ಕರ್ನಾಟಕ ಪದವಿಪೂರ್ವ ಕಾಲೇಜಿನ ದೈಹಿಕ ನಿರ್ದೇಶಕ ಶ್ರೀ ಗಂಗಾಧರ ರೈ, ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲಾ ಸಂಚಾಲಕರಾದ ಜೆ. ಪ್ರಹ್ಲಾದ ಶೆಟ್ಟಿ, ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದ ಪ್ರಾಂಶುಪಾಲರಾದ ರವೀಂದ್ರ ದರ್ಬೆ, ಅಧ್ಯಾಪಕರ ಸಹಕಾರಿ ಸಂಘದ ನಿರ್ದೇಶಕ ಟಿ. ಶೇಷಪ್ಪ ಮೂಲ್ಯ, ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ಎಸ್. ಚೆನ್ನಪ್ಪ ಅಂಚನ್, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಜಿ. ಕೋಮಲಾಂಗಿ, ಕಡೇಶ್ವಾಲ್ಯ ಗ್ರಾ.ಪಂ. ಸದಸ್ಯ ಸುರೇಶ್ ಬನಾರಿ, ಯಂ.ಯಂ. ಶರೀಫ್ ಬಿ.ಸಿ.ರೋಡು ಭಾಗವಹಿಸಿದ್ದರು. ಸ್ಥಳೀಯ ಹಲವು ಸಂಘ ಸಂಸ್ಥೆಗಳ ಸಹಕಾರದಲ್ಲಿ ನಡೆದ ಶಿಬಿರವು ಸಾಮಾನ್ಯ ರೋಗ, ಎಲುಬು ಮತ್ತು ಗಂಟು ವಿಭಾಗ, ಕಣ್ಣಿನ ವಿಭಾಗ, ಮಕ್ಕಳ ವಿಭಾಗ, ಕಿವಿ-ಮೂಗು-ಗಂಟಲು, ಸ್ತ್ರೀ ರೋಗ ವಿಭಾಗದಲ್ಲಿ 250 ಮಂದಿ ಶಿಬಿರಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡರು. ಹಾಗೂ 35 ಶಿಬಿರಾರ್ಥಿಗಳಿಗೆ ಮಂಗಳೂರಿನ ಕೆ.ಎಂ.ಸಿ. ಆಸ್ಪತ್ರೆಗೆ ಹೆಚ್ಚಿನ ತಪಾಸಣೆಗೆ ಮತ್ತು ಶಸ್ತ್ರಚಿಕಿತ್ಸೆಗೊಳಪಡಲು ಸೂಚಿಸಲಾಯಿತು. 85 ಮಂದಿಗೆ ಕನ್ನಡಕವನ್ನು ಉಚಿತವಾಗಿ ವಿತರಿಸಲಾಯಿತು. ಲಯನ್ಸ್ ಕ್ಲಬ್ ಉಪಾಧ್ಯಕ್ಷರುಗಳಾದ ಲಕ್ಷ್ಮಣ್ ಕುಲಾಲ್, ಜಗದೀಶ್ ಯಡಪಡಿತ್ತಾಯ, ಸುಧಾಕರ ಆಚಾರ್ಯ, ಪುಷ್ಪರಾಜ್ ಶೆಟ್ಟಿ, ಉಮೇಶ್ ಆಚಾರ್ಯ, ಶಿವಾನಂದ ಬಾಳಿಗ, ಬಿ. ಸತ್ಯನಾರಾಯಣ ರಾವ್, ಕೃಷ್ಣಶ್ಯಾಮ್, ಉಮೇಶ್ ಪಿ., ಮಲ್ಲಿಕಾ ಗಂಗಾಧರ್, ದೇವಿಕಾ ದಾಮೋದರ್, ಚಿತ್ರಾ ಯಡಿಪಡಿತ್ತಾಯ, ಪ್ರಮೀಳಾ ಶ್ರೀನಿವಾಸ್, ಸವಿತಾ ಲಕ್ಷ್ಮಣ್ ಉಪಸ್ಥಿತರಿದ್ದರು. ಗಂಗಾಧರ ಶೇರಾ ಬಿ. ಇವರು ಎಲ್ಲರನ್ನು ಸ್ವಾಗತಿಸಿದರು. ಲಯನ್ಸ್ ಕಾರ್ಯದರ್ಶಿ ಶ್ರೀನಿವಾಸ್ ಪೂಜಾರಿ ಮೆಲ್ಕಾರ್ ಕಾರ್ಯಕ್ರಮ ನಿರ್ವಹಿಸಿದರು.

By suddi9

Leave a Reply

Your email address will not be published. Required fields are marked *