ಬಂಟ್ವಾಳ: ದ.ಕ.ಜಿಲ್ಲಾ ಪಂಚಾಯತ್, ಬಂಟ್ವಾಳ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಪಂಚಾಯತ್, ಬಂಟ್ವಾಳ ತಾಲೂಕು ವಾಮದಪದವು ಸ.ಪ್ರ.ದ.ಕಾಲೇಜಿನ ರಾ.ಸೇ.ಯೋಜನೆ ಘಟಕ, ವಾಮದಪದವು ಸ.ಪ.ಪೂ.ಕಾಲೇಜಿನ ರಾ.ಸೇ.ಯೋಜನೆ ಘಟಕ, ವಾಮದಪದವು ಸಮುದಾಯ ಆರೋಗ್ಯ ಕೇಂದ್ರ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ 2015 ಕಾರ್ಯಕ್ರಮ ವಾಮದಪದವು ಕರಿಮಲೆ ರಮೇಶ್ ಪೈ ಸಭಾಭವನದಲ್ಲಿ ಸೋಮವಾರ ಜರಗಿತು.
ಜಿ.ಪಂ. ಸದಸ್ಯೆ ನಳಿನಿ ಬಿ.ಶೆಟ್ಟಿ ಅವರು ಕಾರ್ಯಕ್ರಮ ಉದ್ಘಾಟಿಸಿದರು. ವಾಮದಪದವು ಸ.ಪ್ರ.ದ.ಕಾಲೇಜು ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ , ಪ್ರಾಧ್ಯಾಪಕ ಪ್ರೊ|ಬಿ.ಹರಿಪ್ರಸಾದ್ ಶೆಟ್ಟಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ ರಾಷ್ಟ್ರದ ಜನಸಂಖ್ಯಾ ನಿಯಂತ್ರಣದ ನಿಟ್ಟಿನಲ್ಲಿ ಭವಿಷ್ಯತ್ತಿನ ಚಿಂತನೆಯಿಂದ ಮುಂದಿನ ಅಭಿವೃದ್ಧಿಗಳ ಬಗ್ಗೆ ಜಾಗೃತಿ ಆಗಬೇಕಾಗಿದೆ. ತಪ್ಪಿದಲ್ಲಿ ರಾಷ್ಟ್ರದ ಋಣಾತ್ಮಕ ಬೆಳವಣಿಗೆಯನ್ನು ಎದುರಿಸಬೇಕಾಗುತ್ತದೆ. ಕಾಲಘಟ್ಟದಲ್ಲಿ ಬದಲಾವಣೆಯಾದಂತೆ ರಾಷ್ಟ್ರೀಯ ಕಾರ್ಯಕ್ರಮಗಳಲ್ಲೂ ಬದಲಾವಣೆಯಾಗಿದ್ದು ಕುಟುಂಬ ಕಲ್ಯಾಣದಂತಹ ಜಾಗೃತಿ ಕಾರ್ಯಕ್ರಮಗಳಿಂದ ದೀರ್ಘಾವ„ ಪರಿಣಾಮ ಬೀರಲು ಸಾಧ್ಯ ಎಂದು ಹೇಳಿದರು.
ಪ್ರತೀ ಒಂದೂವರೆ ಸೆಕೆಂಡಿಗೆ ಮಗುವಿನ ಜನನವಾಗುತ್ತಿದ್ದು ವರ್ಷಕ್ಕೆ ಒಂದೂವರೆ ಕೋಟಿಯಷ್ಟು ಜನಸಂಖ್ಯೆ ಏರುತ್ತಿದೆ. ಈ ಬಗ್ಗೆ ಗಂಭೀರವಾಗಿ ಚಿಂತಿಸುವ ಅಗತ್ಯತೆ ಇದೆ. ಭಾರತದ ಸಾಮಾಜಿಕ, ಸಾಂಸ್ಕøತಿಕ, ಆರ್ಥಿಕ ಹಿನ್ನೆಲೆ ಜನಸಂಖ್ಯೆ ಏರಿಕೆಗೆ ಪ್ರೇರಕವಾಗಿದೆ. ಮನುಷ್ಯ ತನ್ನ ಇಚ್ಛೆ ಮತ್ತು ವ್ಯಸನವನ್ನು ನಿಯಂತ್ರಿಸದಿದ್ದರೆ ತನ್ನ ಗೋರಿಯನ್ನು ತಾನೇ ತೋಡಿಕೊಂಡಂತೆ. ಇದು ರಾಷ್ಟ್ರದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಅವರು ಹೇಳಿದರು.
ಬಂಟ್ವಾಳ ತಾ.ಪಂ.ಅಧ್ಯಕ್ಷ ಯಶವಂತ ಡಿ. ಅಧ್ಯಕ್ಷತೆ ವಹಿಸಿದ್ದರು. ವಾಮದಪದವು ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾ„ಕಾರಿ ಡಾ|ದುರ್ಗಾಪ್ರಸಾದ್ ಎಂ.ಆರ್. ಅವರು ಪ್ರಸ್ತಾವಿಸಿ ಮಾತನಾಡಿ ಜಿಲ್ಲೆಯಲ್ಲಿ ಹರಡಿದ್ದ ಡೆಂಗ್ಯೂ ಮತ್ತಿತರ ಸಾಂಕ್ರಾಮಿಕ ರೋಗಗಳ ಮುನ್ನೆಚ್ಚರಿಕೆ ಕಾರ್ಯಕ್ರಮಗಳಿಂದಾಗಿ ಜು.11ರ ವಿಶ್ವ ಜನಸಂಖ್ಯೆ ದಿನಾಚರಣೆ ಕಾರ್ಯಕ್ರಮವನ್ನು ತಾಲೂಕು ಮಟ್ಟದಲ್ಲಿ ಇಂದು ಆಚರಿಸಲಾಗುತ್ತದೆ. ಜನಸಂಖ್ಯಾ ಸೋಟದಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪರಿಣಾಮದ ಬಗ್ಗೆ ವಿಶ್ವಸಂಸ್ಥೆಯಿಂದ ಕಟ್ಟುನಿಟ್ಟಾಗಿ ವಿಶ್ವ ಜನಸಂಖ್ಯೆ ದಿನಾಚರಣೆ ನಡೆಸಲಾಗುತ್ತದೆ. ಈ ಬಗ್ಗೆ ಜನಜಾಗೃತಿ ಅತ್ಯಗತ್ಯ ಎಂದು ಹೇಳಿದರು.
ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ತಾ.ಪಂ.ಸದಸ್ಯ ರಮೇಶ್ ಕುಡುಮೇರು, ಚೆನ್ನೈತ್ತೋಡಿ ಗ್ರಾ.ಪಂ.ಅಧ್ಯಕ್ಷ ಎಂ.ಯತೀಶ್ ಶೆಟ್ಟಿ , ಕುಕ್ಕಿಪಾಡಿ ಗ್ರಾ.ಪಂ.ಅಧ್ಯಕ್ಷ ದಿನೇಶ್ ಸುಂದರಶಾಂತಿ, ಜಿಲ್ಲಾ ಕುಟುಂಬ ಕಲ್ಯಾಣಾ„ಕಾರಿ ಸಿಕಂದರ್‍ಪಾಷಾ, ತಾಲೂಕು ಆರೋಗ್ಯಾ„ಕಾರಿ ಡಾ|ಮಂಜುನಾಥ ಎಂ., ವಾಮದಪದವು ಸ.ಪ್ರ.ದ.ಕಾಲೇಜು ರಾ.ಸೇ.ಯೋಜನಾ„ಕಾರಿ ದಯಾನಂದ್, ಜಿಲ್ಲಾ ಆರೋಗ್ಯ ಶಿಕ್ಷಣಾ„ಕಾರಿ ಜ್ಯೋತಿ, ಗುತ್ತಿಗೆದಾರ ಅಮ್ಮು ರೈ ಹರ್ಕಾಡಿ, ಪುಂಜಾಲಕಟ್ಟೆ ಪ್ರಾ.ಆ.ಕೇಂದ್ರದ ಡಾ|ಸೋಹಾನ್ ಕುಮಾರ್, ದೈವಸ್ಥಳ ಪ್ರಾ.ಆ.ಕೇಂದ್ರದ ಡಾ| ಉಮೇಶ ಅಡ್ಯಂತಾಯ ವೇದಿಕೆಯಲ್ಲಿದ್ದರು. ಚೆನ್ನೈತ್ತೋಡಿ, ಕುಕ್ಕಿಪಾಡಿ ಗ್ರಾ.ಪಂ.ಸದಸ್ಯರು, ಸಮುದಾಯ ಆರೋಗ್ಯ ಕೇಂದ್ರದ ಸಿಬಂದಿ ವರ್ಗ, ಕಾಲೇಜು ಉಪನ್ಯಾಸಕರು, ಆರೋಗ್ಯ ಕೇಂದ್ರ ವ್ಯಾಪ್ತಿಯ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ವಿವಿಧ ಶಿಕ್ಷಣ ಸಂಸ್ಥೆಗಳ ಪ್ರತಿನಿ„ಗಳು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸಮುದಾಯ ಆರೋಗ್ಯ ಕೇಂದ್ರದ ವತಿಯಿಂದ ಪ್ರಾಥಮಿಕ, ಪ್ರೌಢ, ಪ.ಪೂ., ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ಡೆಂಗ್ಯೂ ಕುರಿತ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮಕ್ಕೆ ಮುನ್ನ ಕಾಲೇಜು ವಿದ್ಯಾರ್ಥಿಗಳಿಂದ ಸ್ವಚ್ಛತೆ ಬಗ್ಗೆ ಜಾಗೃತಿ ಹಾಗೂ ಇತರ ವೈವಿಧ್ಯಮಯ ಕಾರ್ಯಕ್ರಮ ನಡೆಯಿತು.
ವೈದ್ಯಾಧಿಕಾರಿ ಡಾ|ದುರ್ಗಾಪ್ರಸಾದ್ ಎಂ.ಆರ್. ಅವರು ಸ್ವಾಗತಿಸಿದರು. ಲತಾ ವಂದಿಸಿದರು. ರಂಗ ಕಲಾವಿದ ಎಚ್ಕೆ ನಯನಾಡು ಕಾರ್ಯಕ್ರಮ ನಿರೂಪಿಸಿದರು.
