ಬಂಟ್ವಾಳ; ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಬಂಟ್ವಾಳ ಪ್ರೆಸ್ ಕ್ಲಬ್ ನ ಜಂಟಿ ಆಶ್ರಯದಲ್ಲಿ “ಮಕ್ಕಳ ಹಕ್ಕು ಮತ್ತು ಮಾಧ್ಯಮ” ಮಾಹಿತಿ-ಸಂವಾದ ಕಾರ್ಯಕ್ರಮವು ಸೆ.2 ರ ಬುಧವಾರ ಅಪರಾಹ್ನ 2 ಗಂಟೆಗೆ ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ನಡೆಯಲಿದೆ. ಬೆಂಗಳೂರಿನ ಚೈಲ್ಡ್ ರೈಟ್ಸ್ ಟ್ರಸ್ಟ್ ನ ನಿರ್ದೇಶಕರಾದ ನಾಗಸಿಂಹ ಜಿ.ರಾವ್ ರವರು ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಲಿದ್ದು, ಬಂಟ್ವಾಳ ಎ ಎಸ್ ಪಿ ರಾಹುಲ್ ಕುಮಾರ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ನಾಯಕ್ ಇಂದಾಜೆ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ತಾಲೂಕು ಹಾಗೂ ಜಿಲ್ಲಾ ವ್ಯಾಪ್ತಿಯ ಪತ್ರಕರ್ತರು ಮತ್ತು ಆಸಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಸಂಘದ ಪ್ರಧಾನ ಕಾರ್ಯದರ್ಶಿ ನಿಶಾಂತ್ ಬಿಲ್ಲಂಪದವು ತಿಳಿಸಿದ್ದಾರೆ
