ಬಂಟ್ವಾಳ: ಬಂಟ್ವಾಳ ತಾಲೂಕಿನ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವ ಬಾವಿ ಸಭೆಯು ಸೆ.3ರಂದು ಗುರುವಾರ ಮಧ್ಯಾಹ್ನ 2 ಗಂಟೆಗೆ ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ಜರಗಲಿದೆ. ಈಸಭೆಯಲ್ಲಿ ಕನ್ನಡ ಸಾಹಿತ್ಯ ಜಿಲ್ಲಾಧ್ಯಕ್ಷ ಪ್ರಧೀಪ್ ಕುಮಾರ್ ಕಲ್ಕೂರ , ಕ್ಷೇತ್ರದ ಶ್ರೀ ಗುರುದೇವಾನಂದ ಸ್ವಾಮೀಜಿ ಉಪಸ್ಥಿತರಿರುವರು ಎಂದು ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಜಯಾನಂದ ಪೆರಾಜೆ ಅವರು ಸುದ್ದಿ9 ಗೆ ತಿಳಿಸಿದ್ದಾರೆ.
