ಮುಂಬಯಿ: ಖಾಸಗಿ ಕಾರ್ಯಕ್ರಮವೊಂದಕ್ಕೆ ಇಂದಿಲ್ಲಿ ಶುಕ್ರವಾರ ಸಂಜೆ ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ.ಭಂಡಾರಿ ಸಭಾಗೃಹಕ್ಕೆ ಆಗಮಿಸಿದ್ದ ಮಹಾರಾಷ್ಟ್ರ ರಾಜ್ಯದ ಮುಖ್ಯಮಂತ್ರಿ ದೇವೇಂದ್ರ ಫಡ್ನಾವಿಸ್ ಅವರನ್ನು ಬಂಟರ ಸಂಘದ ವತಿಯಿಂದ ಸಂಘದ ಅಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿಅವರು ತಮ್ಮ ಪದಾಧಿಕಾರಿಗಳನ್ನೊಳಗೊಂಡು ಪುಷ್ಪಹಾರವನ್ನಿತ್ತು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಪ್ರಭಾಕರ ಎಲ್.ಶೆಟ್ಟಿ, ಗೌ| ಪ್ರ| ಕಾರ್ಯದರ್ಶಿ ಉಳ್ತೂರು ಮೋಹನ್‍ದಾಸ್ ಶೆಟ್ಟಿ, ಗೌ| ಕೋಶಾಧಿಕಾರಿ ಸಿಎ| ಐ.ಆರ್ ಶೆಟ್ಟಿ, ಜತೆ ಕಾರ್ಯದರ್ಶಿ ಕಿಶೋರ್‍ಕುಮಾರ್ ಶೆಟ್ಟಿ ಕುತ್ಯಾರ್, ಜತೆ ಕೋಶಾಧಿಕಾರಿ ಮಹೇಶ್ ಎಸ್.ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶ್ರೀಮತಿ ಲತಾ ಜೆ. ಶೆಟ್ಟಿ, ಎಸ್.ಎಂ ಶೆಟ್ಟಿ ಶೈಕ್ಷಣಿಕ ಸಮಿತಿ ಕಾರ್ಯಧ್ಯಕ್ಷ ಜಯರಾಮ ಎನ್.ಶೆಟ್ಟಿ, ಡಾ|ಪ್ರಭಾಕರ ಶೆಟ್ಟಿ ಬಿ., ಜ್ಞಾನ ಮಂದಿರ ಸಮಿತಿ ಕಾರ್ಯಧ್ಯಕ್ಷ ಬೊಳ್ನಾಡುಗುತ್ತು ಚಂದ್ರಹಾಸ ರೈ, ಉನ್ನತ ಶಿಕ್ಷಣ ಸಮಿತಿ ಕಾರ್ಯಧ್ಯಕ್ಷಚಂದ್ರಹಾಸ ಕೆ.ಶೆಟ್ಟಿ, ದಿವಾಕರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
