ಬಂಟ್ವಾಳ: ರಾಜ್ಯ ಸರ್ಕಾರವು ಕಳೆದ ವರ್ಷದಿಂದ ರಾಜ್ಯದಾದ್ಯಂತ ಸರ್ಕಾರಿ ಕಾರ್ಯಕ್ರಮವಾಗಿ ಆಚರಿಸುತ್ತಿರುವ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಆಚರಣೆಯಿಂದ ಧಾರ್ಮಿಕತೆ ಜೊತೆಗೆ ಪರಸ್ಪರ ಸೌಹಾರ್ದತೆಗೆ ಪೂರಕವಾಗುತ್ತದೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.
5btl-shrikrishna
ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ನಲ್ಲಿ ಶನಿವಾರ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ತಾ. ಪಂ.ಸದಸ್ಯ ಮಾಧವ ಎಸ್.ಮಾವೆ, ಎಪ್ರಿಯಂ ಸಿಕ್ವೇರಾ, ಅಕ್ರಮ -ಸಕ್ರಮ ಸಮಿತಿ ಸದಸ್ಯೆ ಫ್ಲೋಸಿ ಡಿಸೋಜ, ಆರಾಧನಾ ಸಮಿತಿ ಅಧ್ಯಕ್ಷ ಚಂದ್ರಶೇಖರ ಪೂಜಾರಿ, ಸದಸ್ಯ ಯೂಸುಫ್ ಕರಂದಾಡಿ , ಸಹಾಯಕ ಕಾರ್ಯನಿರ್ವಹಕ ಇಂಜಿನಿಯರ್ ಉಮೇಶ್ ಭಟ್, ಯಾದವ ಸಭಾ ಕೇಂದ್ರ ಸಮಿತಿ ಉಪಾಧ್ಯಕ್ಷ ಪ್ರಕಾಶ್ ಪೆರುವಾಯಿ, ಯಾದವ ಸಭಾ ತಾಲ್ಲೂಕು ಸಮಿತಿ ಅಧ್ಯಕ್ಷ ಎಸ್.ಗೋಪಾಲ್, ಉಪತಹಶೀಲ್ದಾರ್ ಪರಮೇಶ್ವರ ನಾಯ್ಕ್, ಕಂದಾಯ ನಿರೀಕ್ಷಕ ನಾರಾಯಣ ಪೂಜಾರಿ ಉಪಸ್ಥಿತರಿದ್ದರು.
ಪ್ರಾಧ್ಯಾಪಕ ನಾಗರಾಜ್ ಅಳಿಕೆ ಪ್ರಧಾನ ಭಾಷಣ ಮಾಡಿದರು. ಇದೇ ವೇಳೆ ವಿವಿಧ ಸ್ಪಧರ್ೆಯಲ್ಲಿ ವಿಜೇತರಾದ ಯಾದವ ಸಮುದಾಯದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ತಹಶಿಲ್ದಾರ್ ಪುರಂದರ ಹೆಗ್ಡೆ ಸ್ವಾಗತಿಸಿ, ಉಪತಹಶೀಲ್ದಾರ್ ಪರಮೇಶ್ವರ ಮೊಯಿಲಿ ವಂದಿಸಿದರು. ರಂಗನಿದರ್ೇಶಕ ಮಂಜು ವಿಟ್ಲ ಕಾರ್ಯಕ್ರಮ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *