ಮೂಡುಬಿದಿರೆ : ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸುತ್ತಿರುವ ಅನ್ನದಾತರಿಗೆ ಆತ್ಮವಿಶ್ವಾಸ ತುಂಬುವ ನಿಟ್ಟಿನಲ್ಲಿ ಸೆ.11 ರಂದು ಬಂಟ್ವಾಳದಲ್ಲಿ ನಡೆಯುವ ಚೈತನ್ಯ ಯಾತ್ರಾ ಸಮಾವೇಶಕ್ಕೆ ಮೂಡುಬಿದಿರೆಯಿಂದ ಸುಮಾರು ಎರಡು ಸಾವಿರ ರೈತರು ಭಾವಹಿಸಲಿದ್ದಾರೆ ಎಂದು ಭಾರತೀಯ ಜನತಾ ಪಾರ್ಟಿಯ ಮೂಡುಬಿದಿರೆ ಕ್ಷೇತ್ರ ಸಮಿತಿಯ ಅಧ್ಯಕ್ಷ ಕೆ.ಪಿ. ಸುಚರಿತ ಶೆಟ್ಟಿ ತಿಳಿಸಿದ್ದಾರೆ.
ಅವರು ಮೂಡುಬಿದಿರೆಯ ಪ್ರೆಸ್‍ಕ್ಲಬ್‍ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದರು. ಕರ್ನಾಟಕ ರಾಜ್ಯಾದಾದ್ಯಂತ ನೂರಾರು ಅನ್ನದಾತ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ನಿದ್ದೆಯಲ್ಲಿದ್ದು, ನಿಷ್ಕ್ರೀಯವಾಗಿದೆ. ಜತೆಗೆ ರೈತ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ ಇದನ್ನು ಪ್ರತಿಭಟಿಸಿ ಭಾ.ಜ.ಪ ನೇತೃತ್ವದಲ್ಲಿ ರಾಜ್ಯಾಧ್ಯಕ್ಷರಾದ ಪ್ರಹ್ಲಾದ ಜೋಶಿ ಮತ್ತು ರಾಷ್ಟ್ರೀಯ ಉಪಾಧ್ಯಕ್ಷ ಯಡಿಯೂರಪ್ಪನವರ ನೇತೃತ್ವದಲ್ಲಿ ಆ.31ರಿಂದ ಸೆ.13ರವರೆಗೆ ರಾಜ್ಯಾದ್ಯಂತ ರೈತ ಚೈತನ್ಯ ಯಾತ್ರೆ ನಡೆಯುತ್ತಿದ್ದು ಈ ನಿಟ್ಟಿನಲ್ಲಿ ಬಂಟ್ವಾಳದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಹೆಚ್ಚಿನವರು ಭಾಗವಹಿಸಬೇಕೆಂದು ತಿಳಿಸಿದರು.
ಬಿಜೆಪಿ ಮುಖಂಡರಾದ ಕಸ್ತೂರಿ ಪಂಜ, ಭುವನಾಭಿರಾಮ ಉಡುಪ, ಕೆ.ಆರ್. ಪಂಡಿತ್, ದೇವ ಪ್ರಸಾದ್ ಪುನರೂರು, ನಾಗರಾಜ ಪೂಜಾರಿ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *