ಬಂಟ್ವಾಳ; ಆತ್ಮಹತ್ಯೆ ಯಾವುದೇ ಸಮಸ್ಯೆಗೆ ಪರಿಹಾರವಲ್ಲ ಎಂಬ ಬಗ್ಗೆ ವ್ಯಾಪಕ ಜಾಗೃತಿಯ ಅಗತ್ಯವಿದ್ದು, ಪ್ರಜ್ಞಾವಂತ ಜನಸಮೂಹ ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಬೇಕಿದೆ ಎಂದು ಹಿರಿಯ ಪ್ರಧಾನ ಸಿವಿಲ್ ನ್ಯಾಯಾಧೀಶ ಚಂದ್ರಶೇಖರ್.ಯು ಹೇಳಿದರು. ಅವರು ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ, ದ.ಕ. ವಕೀಲರಸಂಘ ಬಂಟ್ವಾಳ ಇದರ ಜಂಟಿ ಆಶ್ರಯದಲ್ಲಿ ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ ಅಂಗವಾಗಿ ಕಾನೂನು ಮಾಹಿತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

1 (1)ರಾಜ್ಯದಲ್ಲಿ ಮೀಟರ್ ಬಡ್ಡಿ ಹಾವಳಿಯಿಂದ ಹಾಗೂ ಕೃಷಿಯಲ್ಲಿ ನಷ್ಟ ಅನುಭವಿಸಿ ರೈತರು ಆತ್ಮಹತ್ಯೆ ಮಾಡಿಕೊಂಡ ಘಟನೆಗಳು ನಡೆದಿದೆ. ಜಿಲ್ಲೆಯಲ್ಲಿ ಈ ಸಮಸ್ಯೆ ಕಡಿಮೆಯಾಘಿರುವುದು ಸಮಾಧಾನಕಾರ ಸಂಗತಿ ಎಂದ ಅವರು, ಕಟ್ಟುನಿಟ್ಟಿನ ಕಾನೂನಿಂದಾಗಿ ಜಿಲ್ಲೆಯಲ್ಲಿ ಮೀಟರ್ ಬಡ್ಡಿ ಹಾವಳಿ ಕಡಿಮೆಯಾಗಿದೆ ಎಂದರು. , ಪ್ರತೀವರ್ಷ ವಿಶ್ವದಲ್ಲಿ 8 ಲಕ್ಷ ದಷ್ಟು ಜನ ಆತ್ಮಹತ್ಯೆ ಶರಣಾಗುತ್ತಿದ್ದು, ಮಾದಕವ್ಯಸನ ಹಾಗೂ ಪ್ರೇಮವೈಫಲ್ಯದಂತಹಾ ಕಾರಣಕ್ಕೆ ಯುವಕರೇ ಇದಕ್ಕೆ ಬಲಿಯಾಗುತ್ತಿರುವುದು ವಿಷಾಧನೀಯ ಎಂದ ಅವರು ಸಾಮಾಜಿಕ ಜಾಗೃತಿಯಿಂದ ಇದಕ್ಕೆ ಪರಿಹಾರ ಸಾಧ್ಯ ಎಂದರು.
ಮುಖ್ಯ ಅತಿಥಿಯಾಗಿ ಮಾತನಾಡಿದ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ದೇವಾನಂದ ರವರು ಮಾತನಾಡಿ, ಆತ್ಮಹತ್ಯೆ ಪಾಪಕೃತ್ಯವಾಗಿದ್ದು, ಆತ್ಮಹತ್ಯೆಗೆ ಯತ್ನಿಸುವವರ ಮಾನಸಿಕ ಖೀನ್ನತೆಯನ್ನು ದೂರಮಾಡುವ ಕಾರ್ಯ ಆಗಬೇಕಾಗಿದೆ ಎಂದರು. ಜೆ ಎಂ ಎಫ್ ಸಿ ನ್ಯಾಯಾಧೀಶ ಆರ್.ಮಹೇಶ್ ಮಾತನಾಡಿ, ರೈತರು ತಮ್ಮ ಅಗತ್ಯತೆಗಿಂತ ಹೆಚ್ಚು ನಿರೀಕ್ಷೆಗಳನ್ನು ಇರಿಸಿಕೊಂಡಿರುವುದರಿಂದ ರೈತರ ಆತ್ಮಹತ್ಯೆ ಯಂತಹಾ ಸಮಸ್ಯೆ ಎದುರಾಗುತ್ತಿದೆ ಎಂದರು. ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ಚಂದ್ರಶೇಖರ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಆತ್ಮಹತ್ಯೆ ಸಾಮಾಜಿಕ ಪಿಡುಗಾಗಿದ್ದು, ಸಂಘ ಸಂಸ್ಥೆಗಳು ಈ ನಿಟ್ಟಿನಲ್ಲಿ ಹೆಚ್ಚು ಮುತವರ್ಜಿ ವಹಿಸಿಕೊಂಡು ಗ್ರಾಮೀಣ ಪ್ರದೇಶಗಳಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದರು.
ಕಾರ್ಯಕ್ರಮದಲ್ಲಿ ಆತ್ಮಹತ್ಯೆ ತಡೆ ಕುರಿತಾಗಿ ಹಿರಿಯ ನ್ಯಾಯವಾದಿಗಳಾದ ಅಜಿತಪ್ರಸಾದ್ , ಪ್ರಸಾದ್ ಕುಮಾರ್, ಅಶ್ವನಿಕುಮಾರ್ ರೈ ಅನಿಸಿಕೆ ವ್ಯಕ್ತಪಡಿಸಿದರು.. ವೇದಿಕೆಯಲ್ಲಿ ಸರ್ಕಾರಿ ಅಭಿಯೋಜಕ ಶೌಖತ್ ಆಲಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ನ್ಯಾಯವಾದಿ ಚಂದ್ರಶೇಖರರಾವ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ನ್ಯಾಯವಾದಿ ರವೀಂದ್ರ ಕುಕ್ಕಾಹೆ ವಂದಿಸಿದರು.

By Suddi9

Leave a Reply

Your email address will not be published. Required fields are marked *