ಮಂಗಳೂರು: ಆನಂದ್ ಫಿಲಂಸ್ ಲಾಂಛನದಲ್ಲಿ ಅಡ್ಯಾರ್ ಮಾಧವ ನಾೈಕ್ ನಿರ್ಮಿಸಿದ ರಾಮ್‍ಶೆಟ್ಟಿ ನಿರ್ಮಾಣ ನಿರ್ದೇಶನದಲ್ಲಿ ತಯಾರಾದ ಸೂಪರ್ ಮರ್ಮಯೆ ತುಳುಚಲನ ಚಿತ್ರ ಸಪ್ಟೆಂಬರ್ 7ಕ್ಕೆ 25 ದಿನಗಳ ಪ್ರದರ್ಶನವನ್ನು ಪೂರೈಸಿದೆ. ಮಂಗಳೂರಿನಲ್ಲಿ ಜ್ಯೋತಿ, ಬಿಗ್ ಸಿನೆಮಾಸ್, ಉಡುಪಿಯಲ್ಲಿ ಕಲ್ಪನಾ, ಹಾಗೂ ಬಿ.ಸಿ.ರೋಡ್‍ನಲ್ಲಿ ನಕ್ಷತ್ರದಲ್ಲಿ ಪ್ರದರ್ಶನಗೊಳ್ಳುತ್ತಿದೆ ಎಂದು ಅಡ್ಯಾರ್ ಮಾಧವ ನಾೈಕ್ ತಿಳಿಸಿದ್ದಾರೆ.
ತುಳುವರು ಏನಿದ್ದರೂ ಹಾಸ್ಯದ ಆ್ಯಟ್ರಾಕ್ಷನ್ ಎಂಬುದು ಮನದಟ್ಟಾಗಿರುವುದರಿಂದ ಸೂಪರ್ ಮರ್ಮಯೆ ಎಂಬ ಹೆಸರಿನಲ್ಲಿ ಪುಲ್ ಕಾಮಿಡಿ ಚಿತ್ರವನ್ನು ನಿರ್ಮಿಸಲಾಗಿದೆ. ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ರೀತಿಯ ಪ್ರೋತ್ಸಾಹ ಲಭಿಸಿದೆ.

 

DSC_3065

DSC_1690

DSC_1686

DSC_0879 ಕುಟುಂಬ ಕುಟುಂಬದೊಳಗೆ ನಡೆಯುವ ಆಂತರಿಕ ಕಲಹಕ್ಕೆ ಹಾಸ್ಯದ ಮನರಂಜನೆ ಒದಗಿಸಲಾಗಿದೆ. ಮಾವ-ಅಳಿಯನ ಸಂಘರ್ಷದ ಚಿತ್ರಕತೆಯಲ್ಲಿ ವಿದ್ಯಾವಂತ. ಅವಿದ್ಯಾವಂತರ ವ್ಯತ್ಯಾಸಗಳನ್ನು ಚಿತ್ರದಲ್ಲಿ ಹಾಸ್ಯರೂಪದಲ್ಲಿ ಬಿಂಬಿಸಲಾಗಿದೆ. ಅಳಿಯನಾಗಿ ಪಂಚರಂಗಿ ಪೆÇಂ ಪೆÇಂ ಖ್ಯಾತಿಯ ಕಾಮಿಡಿ ಕಿಂಗ್ ಮೀನನಾಥ ರಾಘವೇಂದ್ರ ರೈ ನಟಿಸಿದ್ದಾರೆ. ಗಂಭೀರ ಪಾತ್ರಧಾರಿಯಾಗಿ ನಗಿಸುವ ವೈಶಿಷ್ಟ್ಯವನ್ನು ಮಾವನ ಪಾತ್ರಧಾರಿ ಗೋಪಿನಾಥ ಭಟ್ ಪ್ರದರ್ಶಿಸಿದ್ದಾರೆ. ಇವರಿಗೆ ಸಾಥ್ ನೀಡುತ್ತಿದ್ದಾರೆ ನವೀನ್ ಡಿ. ಪಡಿಲ್, ಭೋಜರಾಜ ವಾಮಂಜೂರು ಅರವಿಂದ ಬೋಳಾರ್ ಹೀಗಾಗಿ ಸಿನಿಮಾದÀಲ್ಲಿ ಕಾಮಿಡಿಗೆ ಕೊರತೆ ಎನ್ನುವುದೇ ಇರುವುದಿಲ್ಲ. ಶಿವಧ್ವಜ್‍ರದ್ದು ಅತಿಥಿ ಪಾತ್ರ. ನಾಯಕಿಯ ಪಾತ್ರದಲ್ಲಿ ದಿವ್ಯಶ್ರೀ ಅಭಿನಯಿಸಿದ್ದಾರೆ.
ರಾಮ್ ಶೆಟ್ಟರಿಗೆ ಬಾಲಿವುಡ್‍ನಲ್ಲಿ ಸಾಥ್ ನೀಡುತ್ತಿದ್ದ ಕ್ಯಾಮರಾಮನ್ ಈಜನ್ ಸೂಪರ್ ಮರ್ಮಯೇ ಸೂಪರ್ ಮಾಡಲು ಕೈ ಜೋಡಿಸಿದ್ದಾರೆ. ಸಂಭಾಷಣೆ: ನವೀನ್ ಶೆಟ್ಟಿ ಅಳಕೆ. ಚಂದ್ರಕಾಂತ್ ಶೆಟ್ಟಿ ಸಂಗೀತ ನಿರ್ದೇಶನ ನೀಡಿದ್ದಾರೆ. ಶಶಿರಾಜ್ ಕಾವೂರು ಸಾಹಿತ್ಯದ ಐದು ಹಾಡುಗಳು ಚಿತ್ರದಲ್ಲಿವೆ. ಸಚಿನ್ ಶೆಟ್ಟಿ ಸಹ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಸಕಲೇಶಪುರದ ಸಹಜ ಪರಿಸರದಲ್ಲಿ ಎರಡು ಹಾಡುಗಳ ಚಿತ್ರೀಕರಣ ನಡೆದಿದೆ. ತಮ್ಮ ಲಕ್ಷ್ಮಣ್ ಕಲಾ ನಿರ್ದೇಶಕರಾಗಿ ದುಡಿದಿದ್ದಾರೆ. ಶೃದ್ಧಾ ಸಾಲಿಯಾನ್, ಶೋಭಾ ರೈ, ಕರ್ನೂರ್ ಮೋಹನ್ ರೈ, ಆ್ಯಗ್ನೆಲ್ ರಾಡ್ರಿಗಸ್, ಪ್ರದೀಪ್ ಆಳ್ವಾ, ಸತೀಶ್ ಬಂದಲೆ, ದೀಪಕ್ ರೈ ಪಾಣಾಜೆ, ಗಣೇಶ್ ಮಲ್ಲಿ ಮೊದಲಾದವರು ಸಿನಿಮಾದಲ್ಲಿ ಬಣ್ಣ ಹಚ್ಚಿದ್ದಾರೆ. ಈವರೆಗಿನ ಮೂರು ತುಳು ಚಿತ್ರಗಳನ್ನು ರಾಮ್ ಶೆಟ್ಟರೇ ನಿರ್ಮಿಸಿ ನಿರ್ದೇಶಿಸಿದ್ದರು. ಈ ಬಾರಿ ಅವರು ಅಡ್ಯಾರು ಮಾಧವ್ ನಾೈಕ್‍ರ ಜತೆಗೂಡಿ ಚಿತ್ರ ನಿರ್ಮಿಸಿದ್ದಾರೆ.
ರಾಮ್ ಶೆಟ್ಟಿ ತುಳು ಚಿತ್ರರಂಗಕ್ಕೆ ಹೊಸಬರೇನಲ್ಲ ಇವರು ಈಗಾಗಲೇ ಮೂರು ಉತ್ತಮ ತುಳು ಚಿತ್ರಗಳನ್ನು ನೀಡಿರುವವರು. 2012ರಲ್ಲಿ ಬಂಗಾರ್ದ ಕುರಲ್ ಭಕ್ತಿ ಪ್ರಧಾನ ಚಿತ್ರ ನಿರ್ಮಿಸಿದ್ದ ಶೆಟ್ಟರು 1982 ಮತ್ತು 83ರಲ್ಲಿ ಬದ್ಕೆರ್ ಬುಡ್ಲೆ ಮತ್ತು ದಾರೆದ ಸೀರೆ ನಿರ್ಮಿಸಿದ್ದರು. ಈ ಎರಡೂ ಚಿತ್ರಗಳು ಇಂದಿಗೂ ತುಳುವರ ಮನದಿಂದ ಅಳಿದಿಲ್ಲ. 700ಕ್ಕೂ ಹೆಚ್ಚು ಹಿಂದಿ, ಮರಾಠಿ, ಗುಜರಾತಿ, ಕನ್ನಡ, ತೆಲುಗು, ತಮಿಳು ಚಲನ ಚಿತ್ರಗಳಲ್ಲಿ ಸ್ಟಂಟ್ ಮಾಸ್ಟರ್ ಆಗಿ ದುಡಿದಿರುವ ಆರ್ಮಿ, ಗದ್ದಾರ್, ಜಾಗೃತಿ, ಕತರ್‍ನಾಕ್ ನಂತಹ ಹಿಂದಿ ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸಿದ್ದಾರೆ.

By Suddi9

Leave a Reply

Your email address will not be published. Required fields are marked *