ಬಂಟ್ವಾಳ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯುವ ರೆಡ್ಕ್ರಾಸ್ ಘಟಕ ಹಾಗೂ ಆಪ್ತ ಸಲಹೆ ಸಮಿತಿಯ ಜಂಟಿ ಆಶ್ರಯದಲ್ಲಿ ‘ನಮ್ಮ ಆರೋಗ್ಯ’ ಎಂಬ ವಿಷಯದ ಬಗ್ಗೆ ಆಪ್ತ ಸಮಲೋಚನೆ ಕಾರ್ಯಕ್ರಮ ನಡೆಯಿತು.
ಜಿಲ್ಲಾ ಮಲೇರಿಯಾ ಪರಿವೀಕ್ಷಕ ಜಯರಾಮ ಪೂಜಾರಿ ಸಂಪನ್ಮೂಲ ವ್ಯಕ್ತಿಯಾಗಿ ವಿದ್ಯಾರ್ಥಿಗಳೊಂದಿಗೆ ಸಮಾಲೋಚಿಸಿದರು. ನೈರ್ಮಲ್ಯ, ಪರಿಸರ ಸಂರಕ್ಷಣೆ ಡೆಂಗ್ಯೂ ಬಗ್ಗೆ ಸವಿಸ್ತಾರವಾಗಿ ಚರ್ಚಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಡಾ. ಗಿರೀಶ ಭಟ್ ವಹಿಸಿದ್ದರು. ರೆಡ್ಕ್ರಾಸ್ ಘಟಕದ ಅಧಿಕಾರಿ ರೊನಾಲ್ಡ್ ಪ್ರವೀಣ್ ಕೊರೆಯಾ ಸ್ವಾಗತಿಸಿ ಪ್ರಾಸ್ತವಿಕ ಮಾತನಾಡಿದರು. ಕಾಲೇಜಿನ ಬೋಧಕ ವರ್ಗದ ಡಾ. ವೈಶಾಲಿ, ಪ್ರೊ. ಮೋಹಿನಿ ಉಪಸ್ಥಿತರಿದ್ದರು.
