ಸುದ್ದಿ9 ಬಂಟ್ವಾಳ : ತಾಲೂಕು ಅಜ್ಜಿಬೆಟ್ಟು ಗ್ರಾಮದ ಆಲದಪದವು ಅಕ್ಷರ ಭಾರತಿ ವಿದ್ಯಾಲಯದ ಶಾಲಾ ವಾರ್ಷಿ ರ್ಕೋತ್ಸವ ಎ.12ರಂದು ಜರಗಿತು.
ಮೂಡಬಿದಿರೆ ಆಳ್ವಾಸ್ ಎಜುಕೇಷನ್ ಫೌಂಡೇಶನ್ ಅಧ್ಯಕ್ಷ ಡಾ|ಮೋಹನ್ ಆಳ್ವ ಅವರು ಮುಖ್ಯ ಅತಿಥಿಯಾಗಿ ಮಾತನಾಡಿ ಉತ್ತಮ ಅವಕಾಶಗಳನ್ನು ಬಳಸಿಕೊಂಡು ಉತ್ತಮ ಶಿಕ್ಷಣ ಪಡೆಯುವಂತಾಗಲು ವಿದ್ಯಾರ್ಥಿಗಳಿಗೆ ಪೋಷಕರು ಆದ್ಯತೆ ನೀಡಬೇಕು. ಗ್ರಾಮೀಣ ಪ್ರತಿಭೆಗಳಿಗೆ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಸದಾ ಬಾಗಿಲು ಮುಕ್ತವಾಗಿರುತ್ತದೆ ಎಂದು ಹೇಳಿದರು.

ಕನ್ನಡ ಚಲನಚಿತ್ರ ನಿರ್ಧೇಶಕ ಮತ್ತು ನಿರ್ಮಾಪಕ ರಾಜೇಂದ್ರಸಿಂಗ್ ಬಾಬು ಅವರು ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ತನಾಡಿ ಗ್ರಾಮೀಣ ಪ್ರದೇಶದಲ್ಲಿ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣನೀಡುವುದು ಶಿಕ್ಷಣ ಸಂಸ್ಥೆಗಳ ಆದ್ಯತೆಯಾಗಬೇಕು. ಈ ನಿಟ್ಟಿನಲ್ಲಿ ಅಕ್ಷರಭಾರತಿ ವಿದ್ಯಾಲಯ ಉತ್ತಮ ಕಾರ್ಯ ನಿರ್ವಹಿಸುತ್ತಿದೆ. ಮುಂದಿನ ದಿನಗಳಲ್ಲಿ ಶಾಲಾಭಿವೃದ್ಧಿಗೆ ಯೋಜನೆಗಳನ್ನು ರೂಪಿಸಿಕೊಂಡು ಸಹಕಾರ ನೀಡಲಾಗುವುದು ಎಂದು ಹೇಳಿದರು. ಉದ್ಯಮಿಗಳಾದ ನವೀನ್ ಕುಮಾರ್ , ಶ್ರೀನಿವಾಸ ಆಳ್ವ ಆಲಂಗಾರುಗುತ್ತು , ಗೋಪಾಲಕೃಷ್ಣ ಪ್ರಭು ನಯನಾಡು, ವರದರಾಜ ಪೈ , ಮುಖ್ಯ ಶಿಕ್ಷಕಿ ಭಾಗ್ಯಲಕ್ಷ್ಮಿ , ಪೋಷಕರ ಸಂಘದ ಅಧ್ಯಕ್ಷ ಅರುಣ್ ಐತಾಳ್, ವಿದ್ಯಾರ್ಥಿಗಳು ನಾಯಕ ಅಶ್ವಿತ್ ಗಟ್ಟಿ ಉಪಸ್ಥಿತರಿದ್ದರು.
ಕನ್ನಡ ಚಲನಚಿತ್ರ ತಾರೆ ರೂಪಿಕಾ ಅವರು ವಿಶೇಷ ಆಹ್ವಾನಿತರಾಗಿ ಭಾಗವಹಿಸಿದ್ದರು.
ಸಂಚಾಲಕ ಮೋಹನ್ ರೈ ಅವರು ಸ್ವಾಗತಿಸಿದರು. ಶಿಕ್ಷಕಿ ಜಯಲೀಲ ವಂದಿಸಿದರು. ಸುಖೇಶ್ ಕಾರ್ಯಕ್ರಮ ನಿರೂಪಿಸಿದರು. ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಂದ ಯಕ್ಷಗಾನ, ಭರತನಾಟ್ಯ , ಕರಾಟೆ , ಯೋಗ, ಸಂಗೀತ, ಕಿರುಪ್ರಹಸನ ಪ್ರದರ್ಶನ ನಡೆಯಿತು.
ಆಲದಪದವು ಅಕ್ಷರಭಾರತಿ ವಿದ್ಯಾಲಯದ ವಾರ್ಷಿಕೋತ್ಸವದಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ|ಮೋಹನ್ ಆಳ್ವ ಅವರು ಮುಖ್ಯ ಅತಿಥಿಯಾಗಿ ಮಾತನಾಡಿದರು

