ಮೂಡುಬಿದಿರೆ: ಕ್ರೀಡಾ ಕ್ಷೇತ್ರದಲ್ಲಿ ಪ್ರಜ್ವಲಿಸುತ್ತಿರುವ ಮೂಡುಬಿದಿರೆಯ ಸಿಂಥೆಟಿಕ್ ಮೈದಾನದಲ್ಲಿ ಭಾರತ ಹಾಗೂ ಶ್ರೀಲಂಕಾದ ಕ್ರೀಡಾಪಟುಗಳ ನಡುವೆ ಬಾಂಧವ್ಯ ವೃದ್ಧಿಸುತ್ತಿರುವುದು ಸಂತಸದಾಯಕ ವಿಷಯ. ಕ್ರೀಡಾ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದ ಡಾ.ಎಂ.ಮೋಹನ್ ಆಳ್ವರಿಂದ ಮಾದರಿ ಬದಲಾವಣೆಯಾಗಿದೆ. ಶಿಕ್ಷಣದ ಜೊತೆ ಕ್ರೀಡಾ ಸ್ಪೂರ್ತಿ ಉತ್ತಮ ವಿಚಾರ ಎಂದು ಕ್ರೀಡಾ ಸಚಿವ ಕೆ.ಅಭಯಚಂದ್ರ ಜೈನ್ ಅಭಿಪ್ರಾಯಪಟ್ಟರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ಶ್ರೀಲಂಕಾದ ಸಿಲೋನ್ ಅಥ್ಲೆಟಿಕ್ಸ್ ಫೆಡರೇಶನ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಮೂಡುಬಿದರೆಯ ಸ್ವರಾಜ್ಯ ಮೈದಾನದಲ್ಲಿ ಎರಡು ದಿನಗಳ ಕಾಲ ನಡೆಯುವ ಸೌಹಾರ್ದ ಅಥ್ಲೆಟಿಕ್ಸ್ಗೆ ಗುರುವಾರ ಚಾಲನೆ ನೀಡಿ ಮಾತನಾಡಿದರು.
10mood shrilanka sports (2)

10mood shrilanka sports (1)
ಶ್ರೀಲಂಕಾದ ಸಾಂಸ್ಕೃತಿಕ ಸಂಯೋಜಕ ಜಿಹಾನ್ ವಿಜೇತನ್, ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿ, ಪುರಸಭಾಧ್ಯಕ್ಷೆ ರೂಪಾ ಎಸ್.ಶೆಟ್ಟಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ, ಶ್ರೀಲಂಕಾದ ಸಿಲೋನ್ ಅಥ್ಲೆಟಿಕ್ಸ್ ಫೆಡರೇಶನ್ನ ಯಶೋರೋಹನ್ ಡಿ’ಸಿಲ್ವಾ, ಉಡುಪಿ ಅಥ್ಲೆಟಿಕ್ ಅಸೋಸಿಯೇಶನ್ನ ಅಧ್ಯಕ್ಷ ದಿನೇಶ್ ಪುತ್ರನ್, ಐಕಳ ಪೊಂಪೈ ಪಿಯು ಕಾಲೇಜಿನ ಪ್ರಾಂಶುಪಾಲ ಜೆರೋಂ ಡಿ’ಸೋಜಾ, ದ.ಕ ಅಥ್ಲೆಟಿಕ್ ಅಸೋಸಿಯೇಶನ್ನ ಅಧ್ಯಕ್ಷ ಜೋಹನ್ ಲೋಬೋ, ನಿಟ್ಟೆ ವಿದ್ಯಾಸಂಸ್ಥೆಯ ಕ್ರೀಡಾಧಿಕಾರಿ ರಾಜಶೇಖರನ್, ಉಜಿರೆ ಎಸ್.ಡಿ.ಎಂನ ಅಥ್ಲೆಟಿಕ್ ತರಬೇತುದಾರ ಬಿ.ಟಿ ಮಾನೆ, ಸಮಾರಂಭದಲ್ಲಿ ಭಾಗವಹಿಸಿದ್ದರು.

ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜಿನ ಪ್ರಾಂಶುಪಾಲ ಜಯಪ್ರಕಾಶ್ ಸ್ವಾಗತಿಸಿದರು. ಅಂತರಾಷ್ಟ್ರೀಯ ಕ್ರೀಡಾಪಟು ಶ್ರೀಯಾ ಪ್ರಿಯದಶರ್ಿನಿ ಪ್ರತಿಜ್ಞಾವಿಧಿ ಬೋಧಿಸಿದರು. ಯುವ ಸಬಲೀಕರಣ ಇಲಾಖೆಯ ಪ್ರವೀಣ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಆಳ್ವಾಸ್ ಶಿಕ್ಷಣ ಸಂಸ್ಥೆ, ದ.ಕ ಜಿಲ್ಲಾ ಅಥ್ಲೆಟಿಕ್ ತಂಡ, ಉಡುಪಿ ಜಿಲ್ಲಾ ಅಥ್ಲೆಟಿಕ್ ತಂಡ, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆ, ನಿಟ್ಟೆ ಶಿಕ್ಷಣ ಸಂಸ್ಥೆ ಮತ್ತು ಮಂಗಳೂರು ವಿವಿ ಕ್ಯಾಂಪಸ್ ತಂಡಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದವು.

By suddi9

Leave a Reply

Your email address will not be published. Required fields are marked *