ಬಂಟ್ವಾಳ:    ವಿದ್ಯಾರ್ಥಿಗಳ ಬದುಕಿನ ವಿಕಾಸಕ್ಕೆ ಪೂರಕವಾಗುವಂತಹ ಶಿಕ್ಷಣದ ಅಗತ್ಯತೆ ಇದೆ. ತರಗತಿಯೊಳಗಿನ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆ, ಕಲೆ, ಸಾಹಿತ್ಯಗಳಲ್ಲಿ ತೊಡಗಿಸಿಕೊಳ್ಳುವುದು ಒಳ್ಳೆಯದು. ಕ್ರೀಡೆಯಲ್ಲಿ ಸೋಲು ಗೆಲುವು ಸಾಮಾನ್ಯ. ಬದುಕಿನಲ್ಲಿ ಸೋಲು ಗೆಲುವು ಎರಡನ್ನೂ ಸಮಾನವಾಗಿ ಸ್ವೀಕರಿಸಬೇಕು. ನಿರಂತರ ಶ್ರಮದ ಮೂಲಕ ಗೆಲುವನ್ನು ಪಡೆಯಬಹುದು. ಕ್ರೀಡಾಚಟುವಟಿಕೆಗಳು ವಿದ್ಯಾರ್ಥಿಯ ಬದುಕಿನಲ್ಲಿ ಸಮಯ ಪಾಲನೆ, ಶಿಸ್ತುಗಳನ್ನು ಮೈಗೂಡಿಸಿಕೊಳ್ಳಲು ನೆರವಾಗುತ್ತದೆ. ಕಠಿಣ ಪರಿಶ್ರಮದ ಮೂಲಕ ಯಶಸ್ಸು ಸಾಧಿಸಬಹುದು ಎಂದು ಶ್ರೀ ವೆಂಕಟರಮಣ ಸ್ವಾಮಿ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಪಾಂಡುರಂಗ ನಾಯಕ್ ಹೇಳಿದರು.

photo 2

photo 1ಅವರು ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಪ.ಪೂ ಕಾಲೇಜಿನಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳೂರು ಇದರ ಸಹಯೋಗದೊಂದಿಗೆ ನಡೆದ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಶಶಿಕಲಾ ಕೆ. ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಪ್ರಸ್ತುತಪಡಿಸಲು ಸೂಕ್ತ ವೇದಿಕೆಯನ್ನು ಕಲ್ಪಿಸುವುದು ಅಗತ್ಯ ಎಂದರು

ದೈಹಿಕ ಶಿಕ್ಷಣ ನಿರ್ದೇಶಕ ಸುಂದರ್ ಸ್ವಾಗತಿಸಿದರು. ವಿದ್ಯಾರ್ಥಿ ಚಿನ್ಮಯ ಪ್ರಾರ್ಥಿಸಿದರು. ಅರ್ಥಶಾಸ್ತ್ರ ಉಪನ್ಯಾಸಕ ಪ್ರದೀಪ್ ಪೂಜಾರಿ ಧನ್ಯವಾದ ಸಲ್ಲಿಸಿದರು. ಉಪನ್ಯಾಸಕ ಚೇತನ್ ಮುಂಡಾಜೆ ಕಾರ್ಯಕ್ರಮ ನಿರ್ವಹಿಸಿದರು

By Suddi9

Leave a Reply

Your email address will not be published. Required fields are marked *