ಕಲ್ಲಡ್ಕ:ಸೆ.12 ಬಂಟ್ವಾಳ ತಾಲೂಕು 16ನೇ ಕನ್ನಡ ಸಾಹಿತ್ಯ ಸಮ್ಮೇಳನವು ಶ್ರೀ ಒಡಿಯೂರು ಗುರುದೇವದತ್ತ ಸಂಸ್ಥಾನದಲ್ಲಿ ಜಾನಪದ ವಿದ್ವಾಂಸ ಡಾ| ಕೆ. ಚಿನ್ನಪ್ಪ ಗೌಡ ಇವರ ಅಧ್ಯಕ್ಷತೆಯಲ್ಲಿ ಸೆ.19 ,ಸೆ.20 ರಂದು ನಡೆಯಲಿದೆ. ಕಾರ್ಯಕ್ರಮದ ವ್ಯವಸ್ಥೆಯ ಬಗ್ಗೆ ಪೂರ್ವಸಿದ್ಧತಾ ಸಭೆಯನ್ನು ಒಡಿಯೂರಿನ ಜ್ಞಾನ ಮಂದಿರದಲ್ಲಿ ಸೆ.13ರಂದು ಅಪರಾಹ್ನ 2.30ಕ್ಕೆ ನಡೆಯಲಿದೆ ಕ.ಸಾ.ಪ. ಸದಸ್ಯರು, ಸ್ವಾಗತ ಸಮಿತಿ ಪದಾಧಿಕಾರಿಗಳು, ವಿವಿಧ ಸಮಿತಿಗಳ ಸದಸ್ಯರು ಭಾಗವಹಿಸುವಂತೆ ಕ.ಸಾ.ಪ ಅಧ್ಯಕ್ಷ ಜಯಾನಂದ ಪೆರಾಜೆ, ಸ್ವಾಗತ ಸಮಿತಿ ಅಧ್ಯಕ್ಷ ಕೈಯೂರು ನಾರಾಯಣ ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
