ಶೇರು ಮಾರುಕಟ್ಟೆ ಚೇತರಿಕೆ
ಸತತ ಮೂರು ದಿನಗಳ ಕುಸಿತ ಕಂಡಿದ್ದ ಬಿಎಸ್‌ಇ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಭರ್ಜರಿ 351 ಪಾಯಿಂಟ್‌ಗಳ ಕುಸಿತ ಕಂಡಿದೆ.span>ಕಾರ್ಪೋರೇಟ್ ಕಂಪೆನಿಗಳು, ಟಿಸಿಎಸ್ ಮತ್ತು ಎಚ್‌ಸಿಎಲ್ ತಂತ್ರಜ್ಞಾನ ಕ್ಷೇತ್ರದ ಶೇರುಗಳ ಖರೀದಿಗೆ ಹೂಡಿಕೆದಾರರು ಆಸಕ್ತಿ ತೋರಿದ್ದರಿಂದ ಶೇರುಪೇಟೆ ಸೂಚ್ಯಂಕ ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
ಕಳೆದ ಮೂರು ದಿನಗಳ ವಹಿವಾಟಿನ ಮುಕ್ತಾಯಕ್ಕೆ 438 ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 351 ಪಾಯಿಂಟ್‌ಗಳ ಏರಿಕೆ ಕಂಡು 22,628.84 ಅಂಕಗಳಿಗೆ ತಲುಪಿದೆ. ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 104.10 ಪಾಯಿಂಟ್‌ಗಳ ಏರಿಕೆ ಕಂಡು 6779.40 ಅಂಕಗಳಿಗೆ ತಲುಪಿದೆ.ಇನ್ಫೋಸಿಸ್, ಟಿಸಿಎಸ್, ಎಕ್ಸಿಸ್ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಎಚ್‌ಡಿಎಫ್‌ಸಿ ಲಿಮಿಟೆಡ್, ಭಾರ್ತಿ ಏರ್‌ಟೆಲ್, ಬಿಎಚ್‌ಇಎಲ್, ಗೇಲ್, ಹಿಂಡಾಲ್ಕೋ, ಐಟಿಸಿ ಮಾರುತಿ ಸುಜುಕಿ, ಮಹೀಂದ್ರಾ ಆಂಡ್ ಮಹೀಂದ್ರಾ, ಟಾಟಾ ಮೋಟಾರ್ಸ್, ಟಾಟಾ ಪವರ್ ಮತ್ತು ಟಾಟಾ ಸ್ಟೀಲ್ ಕಂಪೆನಿಗಳ ಶೇರುಗಳು ವಹಿವಾಟಿನಲ್ಲಿ ಭಾರಿ ಚೇತರಿಕೆ ಕಂಡಿವೆ.